ಉತ್ತಮ ಸಮಾಜಕ್ಕಾಗಿ

ಪ್ರಗತಿಯಲ್ಲಿರುವ ಕಾಮಗಾರಿಗಳನ್ನು 2018ರ ಮಾರ್ಚ್‍ನೊಳಗೆ ಪೂರ್ಣಗೊಳಿಸಿ: ಸಿಇಒ ರಾಮಚಂದ್ರನ್

0

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿ ಡಿಸೆಂಬರ್.1 ರಂದು ಸಿವಿಲ್ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಆರ್.ಎಂ.ಎಸ್.ಎ ಯೋಜನೆಯಡಿಯಲ್ಲಿ ಪ್ರೌಢಶಾಲೆಗಳ ಬಲವರ್ಧನೆ, ಉನ್ನತೀಕರಿಸಿದ ಪ್ರೌಢಶಾಲೆಗಳು, ಆದರ್ಶ ವಿದ್ಯಾಲಯಗಳು ಮತ್ತು ಹೆಣ್ಣು ಮಕ್ಕಳ ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳು ಪ್ರಾರಂಭವಾಗಿದ್ದು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು 2018ರ ಮಾರ್ಚ್ ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಕಟ್ಟಡಗಳನ್ನು ಶಾಲೆಗೆ ಹಸ್ತಾಂತರಿಸುವ ಪೂರ್ವದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಭಿಯಂತರರು ಜಂಟಿಯಾಗಿ ಭೇಟಿ ನೀಡಿ ಕಟ್ಟಡಗಳ ಗುಣಮಟ್ಟವನ್ನು ವಾರಕ್ಕೊಮ್ಮೆ ಪರಿಶೀಲಿಸಿ ಕಾಮಗಾರಿಗಳ ಪ್ರಕಾರ ವರದಿಯನ್ನು ಜಿಲ್ಲಾ ಪಂಚಾಯತಗೆ ಸಲ್ಲಿಸಬೇಕೆಂದು ತಿಳಿಸಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎ.ಬಿ. ಪುಂಡಲೀಕ, ಚಿಕೋಡಿಯ ಉಪನಿರ್ದೇಶಕರಾದ ರಾಜೀವ ನಾಯಿಕ, ಅಭಿಯಂತರರು ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ ಅವರು ಸ್ವಾಗತಿಸಿದರು. ಸಹಾಯಕ ಸಮನ್ವಯಾಧಿಕಾರಿಗಳಾದ ಎ.ಡಿ. ಮತ್ತಿಕಲ್ಲಣ್ಣವರ ವಂದಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.