ಉತ್ತಮ ಸಮಾಜಕ್ಕಾಗಿ

ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದಲ್ಲಿ ಬೈಕ್ ರ್ಯಾಲಿ

0

ಬೆಂಗಳೂರು/ಬೆಳಗಾವಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರ 71 ನೇ ಜನ್ಮ ದಿನಾಚರಣೆ ಅಂಗವಾಗಿ ಕೆ.ಪಿ.ಸಿ.ಸಿ‌ ಮಹಿಳಾ ಘಟಕದ ವತಿಯಿಂದ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದಲ್ಲಿ ಇಂದು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಯಿತು.ನಗರದ ಪಕ್ಷದ ಕಛೇರಿಯಿಂದ ಕೆ.ಪಿ.ಸಿ.ಸಿ. ಅಧ್ಯಕ್ಷ ಜಿ. ಪರಮೇಶ್ವರ ರವರು ರ್ಯಾಲಿಗೆ ಚಾಲನೆ ನೀಡಿದರು. ಇಲ್ಲಿಂದ ಹೊರಟ ನೂರಾರು ಮಹಿಳಾ ಕಾರ್ಯಕರ್ತರನ್ನು ಹೊಂದಿದ ಬೈಕ್ ರ್ಯಾಲಿಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.ಗುಲಾಬಿ ಬಣ್ಣದ ಬಲೂನುಗಳಿಂದ ವಾಹನಗಳನ್ನು ಅಲಂಕರಿಸಿದ್ದರು. ಈ ನಡುವೆ ಬಲೂನುಗಳನ್ನು ಗಾಳಿಯಲ್ಲಿ ಹಾರಿಸಿ ತಮ್ಮ ನೆಚ್ಚಿನ ನಾಯಕಿಗೆ ಶುಭ ಕೋರಿದರು. ರ್ಯಾಲಿ ಸಾಗುವ ರಸ್ತೆಯುದ್ದಕ್ಕೂ ಸೂಕ್ತ ಬಂದೋಬಸ್ತ ಏರ್ಪಡಿಸಿದ್ದ ಪೋಲಿಸರು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಕೆ.ಪಿ.ಸಿ.ಸಿ. ಮಹಿಳಾ ಘಟಕದ ಉಸ್ತುವಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್, ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: