ಉತ್ತಮ ಸಮಾಜಕ್ಕಾಗಿ

ಜಿಲ್ಲೆಯಲ್ಲಿ ಡಿ.21ರಿಂದ ಸಿಎಂ ಪ್ರವಾಸ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ

0

ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳು ಶ್ರೀ ಸಿದ್ದರಾಮಯ್ಯನವರು ಡಿಸೆಂಬರ್ 21 ಹಾಗೂ 22 ರಂದು ಜಿಲ್ಲಾ ಪ್ರವಾಸ ಕೈಕೊಳ್ಳಲಿದ್ದು, ಈ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿಸೆಂಬರ್ 21ರಂದು (ಗುರುವಾರ) ಬೆಳಿಗ್ಗೆ 10 ಗಂಟೆಗೆ ವಿಜಯಪುರದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.40ಕ್ಕೆ ಗೋಕಾಕ ನಗರದ ಡಾಲರ್ಸ್ ಕಾಲೋನಿಯ ಆಗಮಿಸಿ, ಸ್ಥಳೀಯ ವಾಲ್ಮೀಕಿ ಕ್ರೀಡಾಂಗಣಕ್ಕೆ ಆಗಮಿಸಿ ಗೋಕಾಕ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 1 ಗಂಟೆಗೆ ರಾಯಬಾಗದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಯಬಾಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
3.15 ರಾಯಬಾಗದ ತಾಲ್ಲೂಕಿನ ಹಾರೂಗೇರಿಯ ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಸಿಪಿಎಡ್ ಕಾಲೇಜು ಮೈದಾನದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಕಾರ್ಯಕ್ರಮದ ಬಳಿಕ ಹೆಲಿಕಾಪ್ಟರ್ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಅಗಮಿಸಿ, ಬೆಳಗಾವಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಡಿಸೆಂಬರ್ 22 ರ ಕಾರ್ಯಕ್ರಮಗಳು:
ಡಿಸೆಂಬರ್ 22 ರಂದು (ಶುಕ್ರವಾರ) 10.20ಕ್ಕೆ ಹುಕ್ಕೇರಿ ತಾಲೂಕಿನ ಯಮಕನಮರಡಿಯ ಸಿಇಎಸ್ ಹೈಸ್ಕೂಲ್ ಮೈದಾನದಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೇರವೆರಿಸುವರು.
ಮಧ್ಯಾಹ್ನ 1.35 ಗಂಟೆಗೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮಕ್ಕೆ ಆಗಮಿಸಿ ರಾಮದುರ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೇರವೆರಿಸುವರು.
ಸಂಜೆ 4.15ಕ್ಕೆ ಕಿತ್ತೂರು ತಾಲ್ಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಕಿತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೇರವೆರಿಸಲಿದ್ದಾರೆ.
ನಂತರ ಧಾರವಾಡ ಜಿಲ್ಲೆಯ ಹುಬ್ಬಳ್ಳಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.