ಉತ್ತಮ ಸಮಾಜಕ್ಕಾಗಿ

ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ದಾಖಲೆ ಪ್ರಮಾಣದ ಖರ್ಚು: -:ಸಿದ್ದರಾಮಯ್ಯ

0

ಬೆಳಗಾವಿ: ನೀರಾವರಿ ಕ್ಷೇತ್ರದ ಅಭೀವೃದ್ಧಿಗೆ 50 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡಿ ದಾಖಲೆ ನಿರ್ಮಿಸಿದ್ದೇವೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಯಮಕನಮರಡಿ ಗ್ರಾಮದ ಸಿಇಎಸ್ ಹೈಸ್ಕೂಲ್ ಮೈದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ರೂ. 7403.63 ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಗ್ಗೆ ಪ್ರಶ್ನೆ ಕೇಳುವ ವಿರೋಧ ಪಕ್ಷ ಮುಖಂಡರು ಸದನದಲ್ಲಿ ನಾನು ಉತ್ತರ ನೀಡುವಾಗ ಯಾವ ಮುಖಂಡರು ಇರಲಿಲ್ಲ.
ಒಂದು ವೇಳೆ ಸರ್ಕಾರದ ಸಾಧೆನಯ ಅಂಕಿ- ಅಂಶಗಳು ಸುಳ್ಳಾಗಿದ್ದರೆ ಯಾವುದೇ ವೇದಿಕೆಯಲ್ಲಿ ನಮ್ಮನ್ನು ಪ್ರಶ್ನಿಸಲಿ ಬಹಿರಂಗ ಚರ್ಚೆಗೆ ಸಿದ್ದ ಎಂದು ಮುಖ್ಯಮಂತ್ರಿಗಳು ಸವಾಲು ಹಾಕಿದರು.
 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡುವಂತೆ ಪ್ರಧಾನಮಂತ್ರಿಗಳ ಬಳಿ ಸರ್ವಪಕ್ಷದ ನಿಯೋಗ ಕರೆದೊಯ್ದು ಗೋಗರೆದರೆ ಅವರು ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಮನಮೋಹಸಿಂಗ್ ಅವರು ಪ್ರಧಾನಿಯಾಗಿದ್ದಾಗ 72 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡಿದ್ದರು. ಅದೇ ರೀತಿ ಈಗ ಯಾಕೆ ಸಾಧ್ಯವಾಗಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಸರ್ಕಾರದ ಕೃಷಿಭಾಗ್ಯ, ಅನಿಲ, ಅನ್ನಭಾಗ್ಯ, ಆರೋಗ್ಯ, ವಿದ್ಯಾಸಿರಿ, ಕ್ಷೀರಭಾಗ್ಯ, ಕ್ಷೀರಧಾರೆ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಇಡೀ ರಾಜ್ಯದ ಇತಿಹಾಸದಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದು ಎಂಬುದನ್ನು ಎದೆತಟ್ಟಿ ಹೇಳುತ್ತೇನೆ ಎಂದರು.
ಹಾಡಿ, ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಅವರಿಗೆ ವಾಸಿಸುವನ್ನೇ ಒಡೆಯ ಎಂದು ಘೋಷಣೆ ಮಾಡಿದ್ದು ನಾವು ಎಂದರು.

ಸತೀಶ ಸೂಕ್ಷ ಮನಸ್ಸಿನ ರಾಜಕಾರಣಿ:
ಸತೀಶ ಜಾರಕಿಹೊಳಿ ಅವರು ಇಡೀ ರಾಜ್ಯದಲ್ಲಿ ಪ್ರಭಾವಿ ರಾಜಕಾಣಿ. ಅವರ ಶಕ್ತಿ ಏನು ಎಂಬುದರ ಅರಿವು ನನಗಿದೆ.

ಮೂಡನಂಬಿಕೆ-ಕಂದಾಚಾರದ ವಿರುದ್ಧ ಸತೀಶ ಜಾರಕಿಹೊಳಿ ಅವರಿಗೆ ಸ್ಪಷ್ಟತೆ ಸಾಧ್ಯ. ಅವರು ವೈಚಾರಿಕತೆ ಹೊಂದಿರುವ ಸೂಕ್ಷಮ ಮನಸ್ಸಿನ ರಾಜಕಾರಣಿ. ಸೌಮ್ಯ ಸ್ವಭಾವದ ಪ್ರಭಾವಿ ರಾಜಕಾರಣಿ ಅವರು ಎಂದು ಮುಖ್ಯಂತ್ರಿಯವರು ಸಿದ್ದರಾಮಯ್ಯ ಅವರು ಬಣ್ಣಿಸಿದರು.
ತುಳಿತಕ್ಕೆ ಒಳಗಾದ ಜನರಿಗೆ ಸಂವಿಧಾನಾತ್ಮಕ ನ್ಯಾಯ ಒದಗಿಸುವುದು ಸತೀಶ ಜಾರಕಿಹೊಳಿ ಅವರ ಹೋರಾಟವಾಗಿದೆ ಎಂದರು. ರಾಜ್ಯದಲ್ಲಿ ಕೆಲವರು ಸಾಮರಸ್ಯ ಹಾಳುಗೆಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಅಭಿವೃದ್ಧಿ ಪರವಾಗಿರುವ ಜನರಲ್ಲ. ನಾವು ಹಿಂದುತ್ವ, ಇಸ್ಲಾಂ, ಕ್ರೈಸ್ತರು, ಜೈನರ ವಿರೋಧಿಗಳಲ್ಲ. ನಾವು ಬಹುತೇಕರು ಹಿಂದೂಗಳು.
ನಾವು ಟಿಪ್ಪು ಮಾತ್ರವಲ್ಲ; ಅಂಬೇಡ್ಕರ್, ಬಸವಣ್ಣ, ಕನಕ, ವಾಲ್ಮೀಕಿ, ಭಗೀರಥ, ರಾಣಿ ಚನ್ನಮ್ಮ, ಅಂಬಿಗರ ಚೌಡಯ್ಯ ಹೀಗೆ ಎಲ್ಲ ಮಹನೀಯರ ಜಯಂತಿ ಮಾಡ್ತೇವಿ. ಸಾಧು- ಸಂತರು ಸೂಫಿಗಳ ಜಯಂತಿಯನ್ನು ಸರ್ಕಾರ ಮಾಡುತ್ತದೆ. ಕೃಷ್ಣ ಜಯಂತಿ, ಚನ್ನಮ್ಮ ಜಯಂತಿ ಆಚರಣೆ ಆರಂಭಿಸಿದ್ದು, ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ಇಟ್ಟಿದ್ದು ನಾವು. ಬಸವ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಆಳವಡಿಸಲು ಆದೇಶಿಸಿದ್ದು, ನಾವು ಇನ್ನೊಬ್ಬರಿಂದ ದೇಶಪ್ರೇಮ ಅಥವಾ ಇತಿಹಾಸವನ್ನು ತಿಳಿಯುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾನು ಕನ್ನಡ ನಾಡಿನ ಮಗ:
ಕರ್ನಾಟಕದ ಮಣ್ಣಿನ ಮಗನಾದ ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಿಂದ ನಮ್ಮ ನಾಡಿನ ಇತಿಹಾಸದ ಪಾಠ ಕಲಿಯುವ ಅಗತ್ಯವಿಲ್ಲ ಎಂದರು. ಕರ್ನಾಟಕವನ್ನು ಬರಮುಕ್ತಗೊಳಿಸುವ ನಿಟ್ಟಿನಲ್ಲಿ ನಾವು ಹೆಜ್ಜೆ ಹಾಕುತ್ತಿದ್ದೇವೆ ಎಂದುರು.

ಯಮಕನಮರಡಿ ಮತಕ್ಷೇತ್ರ: 7403.63 ಲಕ್ಷ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
ಬೆಳಗಾವಿ: ಯಮಕನಮರಡಿಯ ಸಿಇಎಸ್ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ (ಡಿ.22) ಹಮ್ಮಿಕೊಂಡಿದ್ದ ಸರಕಾರದ ಸಾಧನಾ ಸಮಾವೇಶದಲ್ಲಿ ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ರೂ.7403.63 ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಜಲಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲ ಅವರು ಮಾತನಾಡಿ, ಸರ್ಕಾರ ಬಡವರು, ರೈತರು, ಹಿಂದುಳಿದವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಕೃಷಿಭಾಗ್ಯ ಯೋಜನೆಯ ಮೂಲಕ ಕೃಷಿಗೆ ಆದ್ಯತೆ ನೀಡಿದೆ. ಇದರಿಂದ ಉತ್ತರ ಕರ್ನಾಟಕದ ಜನರಿಗೆ ಅತೀ ಹೆಚ್ಚು ಪ್ರಯೋಜನವಾಗಿದೆ ಎಂದು ಹೇಳಿದರು.
ನಾಲ್ಕೂವರೆ ವರ್ಷದಲ್ಲಿ ನೀರಾವರಿಗೆ ರೂ. 45 ಸಾವಿರ ಕೋಟಿ ಖರ್ಚು ಮಾಡುವ ಮೂಲಕ ನುಡಿದಂತೆ ನಡೆದಿದ್ದೇವೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ರೂ. 30 ಸಾವಿರ ಕೋಟಿಗೂ ಅಧಿಕ ಖುರ್ಚು ಮಾಡಿದ್ದೇವೆ. ಮುಖ್ಯಮಂತ್ರಿಯವರು ಉತ್ತರ ಕರ್ನಾಟಕಕ್ಕೆ ಅತಿ ಹೆಚ್ಚು ನೆರವು ನೀಡಿದ್ದಾರೆ. ಸಾಲಮನ್ನಾದ ಅತಿ ಹೆಚ್ಚು ಪಾಲು ಉತ್ತರ ಕರ್ನಾಟಕದ ರೈತರಿಗೆ ಲಭಿಸಿದೆ ಎಂದು ತಿಳಿಸಿದರು.
ಶಾಸಕ ಸತೀಶ ಜಾರಕಿಹೊಳಿ ಅವರ ಪ್ರಯತ್ನದಿಂದ ಯಮಕನಮರಡಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ. ಕ್ಷೇತ್ರದ ಸುಮಾರು ಎರಡೂವರೆ ಸಾವಿರ ಎಕರೆ ಪ್ರದೇಶ ನೀರಾವರಿಗೆ ಒಳಪಡಲಿದೆ. ಜಲಸಂಪನ್ಮೂಲ ಇಲಾಖೆಯಿಂದ ಅನೇಕ ಯೋಜನೆಗಳು ಈ ಮತಕ್ಷೇತ್ರಕ್ಕೆ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಮಾತನಾಡಿ, ನೀರಾವರಿಗೆ ಆದ್ಯತೆ ನೀಡುವ ಮೂಲಕ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವು ಜನಪ್ರತಿನಿಧಿಗಳು ಪ್ರಯತ್ನಿಸೋಣ ಎಂದರು.

ಸಾಮಾಜಿಕ ಕೆಲಸಕ್ಕೆ ಆದ್ಯತೆ: ಸತೀಶ ಜಾರಕಿಹೊಳಿ
ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ರಾಜಕೀಯಕ್ಕಿಂತ ಸಾಮಾಜಿಕ ಕೆಲಸಗಳಿಗೆ ತಾವು ಹೆಚ್ಚು ಆದ್ಯತೆ ನೀಡುತ್ತಿದ್ದು, ಮೂಢನಂಬಿಕೆ ವಿರೋಧಿ ಕಾರ್ಯಕ್ರಮ, ಕ್ರೀಡಾಕೂಟಗಳ ಆಯೋಜನೆ ಸೇರಿದಂತೆ ಜನೋಪಯೋಗಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸುತ್ತಿದ್ದೇವೆ ಎಂದು ಹೇಳಿದರು.
ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದ್ದು, ಜನರು ಸರ್ಕಾರದ ಸಾಧನೆಗಳನ್ನು ಗಮನಿಸಬೆಕು ಎಂದು ಹೇಳಿದರು.
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಶೇಠ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಜಿಲ್ಲಾ ಪಂಚಾಯತಿ ಸದಸ್ಯರು, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.