ಉತ್ತಮ ಸಮಾಜಕ್ಕಾಗಿ

ಕೊನೆಗೂ ನನಸಾದ ರೈತರ ಕನಸು

0

ಬೆಳಗಾವಿ: ರೈತರ ಬಹು ದಿನಗಳ ಬೇಡಿಕೆಯಾಗಿದ್ದ ಬೈಲಹೊಂಗಲ ವಿಧಾನಸಭೆ ವ್ಯಾಪ್ತಿಯ ಸಿಧ್ದನಸಮುದ್ರ ಹಾಗೂ ಸುತ್ತಮುತ್ತಲಿನ ಕೆರೆಗಳಿಗೆ ಮಲಪ್ರಭಾ ನದಿಯಿಂದ ನೀರು ತುಂಬುವ ಕಾರ್ಯಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅನುಮೋದನೆ ನಿಡಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು ಒಂದು ವರ್ಷದ ಹಿಂದೆ ಜಿಲ್ಲಾ ಪಂಚಾಯತ ಸದಸ್ಯ ಶಂಕರ ಮಾಡಲಗಿ ಅಕ್ಕಪಕ್ಕದ ಹಳ್ಳಿಗಳ ರೈತರನ್ನು ಒಗಟ್ಟು ಗೂಡಿಸಿ ನೂರಾರು ಟ್ರಾಕ್ಟರ್ ಗಳ ಸಮೇತ ಬೈಲಹೊಂಗಲದ ಉಪವಿಭಾಗಾಧಿಕಾರಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿ ಕೆರೆಗಳಿಗೆ ನೀರು ತುಂಬಲು ಆಗ್ರಹಿಸಿದ್ದನ್ನು ಈ ಸಂಧರ್ಭದಲ್ಲಿ ಸ್ಮರಿಸಬಹುದು. ಸುಮಾರು ಒಂದು ವರ್ಷದ ಹೋರಾಟಕ್ಕೆ ಇಂದು ಜಯ ಸಿಕ್ಕಿದಂತಾಗಿದೆ. ಈ ನಿಟ್ಟಿನಲ್ಲಿ ರೈತರು ಹಾಗೂ ಗ್ರಾಮಸ್ಥರ ವತಿಯಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಂಕರ ಮಾಡಲಗಿಯವರನ್ನು ಸನ್ಮಾನಿಸಲಾಯಿತು.

Leave A Reply

 Click this button or press Ctrl+G to toggle between Kannada and English

Your email address will not be published.