ಉತ್ತಮ ಸಮಾಜಕ್ಕಾಗಿ

ಪ್ರಗತಿ ಪರಿಶೀಲನಾ ಸಭೆ

0

ಬೆಳಗಾವಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ. ಹುಚ್ಚಪ್ಪ ಅವರು ನಗರದ ಖಾಸಗಿ ಹೊಟೇಲ್‍ನಲ್ಲಿ ಇತ್ತೀಚೆಗೆ ಬೆಳಗಾವಿ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರು ಹಾಗೂ ಜಿಲ್ಲಾ ವ್ಯವಸ್ಥಾಪಕರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ ನಿಗಮದ ವಿವಿಧ ಸಾಲ ಯೋಜನೆಗಳಲ್ಲಿ ಸಾಲಸೌಲಭ್ಯ ಪಡೆದ ಫಲಾನುಭವಿಗಳ ಘಟಕಗಳು, ಗಂಗಾಕಲ್ಯಾಣ ಯೋಜನೆಯಲ್ಲಿ ಕೊರೆದ ಕೊಳವೆ ಬಾವಿಗಳ ಘಟಕಗಳು ಹಾಗೂ ಏತ ನೀರಾವರಿ ಯೋಜನೆ ಘಟಕಗಳ ಪರಿಶೀಲನೆ ಕೈಗೊಂಡರು ಮತ್ತು ನಿಗಮದ ವತಿಯಿಂದ ಸಾಲ ಸೌಲಭ್ಯ ಪಡೆದಿರುವ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಸಭೆಯಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಫಲಾನುಭವಿಗಳು ಪಾಲ್ಗೊಂಡಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.