ಉತ್ತಮ ಸಮಾಜಕ್ಕಾಗಿ

ಪ್ರಕಟಣೆ

0

ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳ ನೋಂದಣಿಗೆ ಡಿ.31 ಕೊನೆಯ ದಿನ
ಬೆಳಗಾವಿ: ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು (Shelter Homes),, ತೆರೆದ ತಂಗುದಾಣಗಳು ನಿರ್ಗತಿಕ ಮಕ್ಕಳ ಕುಠೀರ, ಬಾಲ ಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು, (ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತುಪಡಿಸಿ) ಎಲ್ಲಾ ರೀತಿಯ ಮಕ್ಕಳ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ಬಾಲ ನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ಸೆಕ್ಷನ್ 41 (1) ರನ್ವಯ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಪತ್ರಿಕಾ ಪ್ರಕಟಣೆಗಳನ್ನು ನೀಡಲಾಗಿದೆ.
ಈ ಕಾಯ್ದೆಯಡಿ ನೋಂದಣಿಯಾಗದೇ, ಮಕ್ಕಳಿಗಾಗಿ ಸಂಸ್ಥೆಗಳನ್ನು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸರ್ವೋಚ್ಛ ನ್ಯಾಯಾಲಯವು ರಿಟ್ ಅರ್ಜಿ (ಕ್ರಿಮಿನಲ್) ಸಂಖ್ಯೆ: 102 oಜಿ 2007 ಗೆ ಸಂಬಂಧಪಟ್ಟಂತೆ 2017ರ ಮೇ 5 ರಂದು ನೀಡಿರುವ ಆದೇಶದಲ್ಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳು ಬಾಲನ್ಯಾಯ ಕಾಯ್ದೆ 2015 ರಡಿಯಲ್ಲಿ ಕಡ್ಡಾಯವಾಗಿ 2017ರ ಡಿಸೆಂಬರ್ 31 ರೊಳಗೆ ನೋಂದಣಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಸ್ಪಷ್ಟವಾಗಿ ನಿರ್ದೇಶನ ನೀಡಿರುತ್ತಾರೆ.
ಬಾಲ ನ್ಯಾಯ ಕಾಯ್ದೆಯಡಿ 2015ರಡಿ ಇದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸಬೇಕು.

ಈಗಾಗಲೇ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದ ಸಂಸ್ಥೆಗಳು ನೋಂದಣಿ ಅವಧಿ ಮುಗಿದಿದ್ದಲ್ಲಿ ಕೂಡಲೇ ನವೀಕರಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಸೆಕ್ಷನ್ 42(1) ರನ್ವಯ ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ ರೂ ಒಂದು ಲಕ್ಷಕ್ಕೆ ಕಡಿಮೆ ಇಲ್ಲದಂತೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು.
ನೋಂದಾಯಿಸಲು ತಡಮಾಡಿದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಫರಾದ ಎಂದು ಪರಿಗಣಿಸಲಾಗುವುದು. ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಯಾಗಿದ್ದರೂ ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಮುಂದುವರೆದು ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳೆಯರು ಮತ್ತು ಹಿರಿಯ ನಾಗರಿಕರಿಂದ ಅಹವಾಲು ಸ್ವೀಕಾರ
ಬೆಳಗಾವಿ:  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜಾರಿಗೊಳಿಸಿರುವ ಬಸ್ ದಿನ (ಪ್ರತಿ ತಿಂಗಳು ದಿನಾಂಕ 20 ರಂದು) ಪ್ರತಿ ತಿಂಗಳ 2ನೇ ತಾರೀಖಿನಂದು ನಮ್ಮ ಬಸ್, ನಮ್ಮ ನಿಲ್ದಾಣ ಸ್ವಚ್ಛತೆಗಾಗಿ ಆಂಧೋಲನ ಕಾರ್ಯಕ್ರಮಗಳಿಗೆ ಜನರಿಂದ ಭಾರೀ ಬೆಂಬಲ, ಪ್ರೋತ್ಸಾಹ ವ್ಯಕ್ತವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸದಾನಂದ ವಿ ಡಂಗನವರ, ಹರ್ಷ ವ್ಯಕ್ತಪಡಿಸಿರುತ್ತಾರೆ.
ಸಾರಿಗೆ ನಿಗಮದಲ್ಲಿರುವ ಹಲವಾರು ಸಮಸ್ಯೆಗಳಿಗೆ ಪ್ರಯಾಣಿಕರೇ ಮುಂದಾಗಿ ಸಲಹೆ ಸೂಚನೆ ನೀಡುತ್ತಿದ್ದಾರೆ. ಇದೊಂದು ಉತ್ತಮ ಬೆಳವಣೆಗೆ ಬಸ್‍ಗಳಲ್ಲಿ, ನಿಲ್ದಾಣಗಳಲ್ಲಿ ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಆಗುವ ಅನಾನುಕೂಲ ನಿವಾರಣೆಗೆ ಮತ್ತು ಅವರ ಸುಖಕರ ಪ್ರಯಾಣಕ್ಕೆ ಏನು ಮಾಡಬೇಕೆಂಬ ಉದ್ದೇಶದಿಂದ ಡಿಸೆಂಬರ್ 29 ರಂದು ಬೆಳಿಗ್ಗೆ 11 ರಿಂದ ಸಾಯಂಕಾಲ 5.30 ರವರೆಗೆ ಮಹಿಳೆಯರು ಮತ್ತು ಹಿರಿಯ ನಾಗರಿಕರ ಜೊತೆ ಸಂವೇದನೆ ಆಯೋಜಿಸಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗೀಯ ಕಛೇರಿಯಲ್ಲಿ ಪೂರ್ತಿ ದಿನ ಮಹಿಳೆಯರು ಮತ್ತು ಹಿರಿಯ ನಾಗರಿಕರಿಂದ ಮಾತ್ರ ಸಲಹೆ ಸೂಚನೆ, ಅಹವಾಲು ಸ್ವೀಕರಿಸಲಾಗುವುದು, ಇದು ಸಾರಿಗೆ ಇಲಾಖೆಯಲ್ಲಿ ಪ್ರಯಾಣಿಕರೇ ನಮ್ಮ ಪ್ರಭುಗಳು ಮಾದರಿಯಲ್ಲಿ ಮಾಡುತ್ತಿರುವ ವಿನೂತನ ಪ್ರಯತ್ನ ಎಂದು ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳ ನೋಂದಣಿಗೆ ಡಿ.31 ಕೊನೆಯ ದಿನ
ಬೆಳಗಾವಿ: ಬೆಂಗಳೂರಿನ ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಅಪ್ರೆಂಟಿಸಿಪ್ ತರಬೇತಿಗಾಗಿ ಐ.ಟಿ.ಐ. ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪೀಟರ್, ಟರ್ನರ್, ಮಷಿನಿಷ್ಟ್, ಎಲೆಕ್ಷ್ರಿಷನ್, ವೆಲ್ಡರ್, ಪಾಸಾ, ಕಾರ್ಪೇಂಟರ್, ಪೌಂಡ್ರಿಮೇನ್, ಶೀಟ್ ಮೆಟಲ್ ವರ್ಕರ್ ಟ್ರೇಡ್ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ, ಐ.ಟಿ.ಐ ಅಂಕಪಟ್ಟಿ ಪ್ರತಿಗಳು, ಜಾತಿ ಪ್ರಮಾಣಪತ್ರ ಮತ್ತು ಭಾವಚಿತ್ರ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು 2018ರ ಜನೇವರಿ 15 ಕೊನೆಯ ದಿನವಾಗಿದೆ.
ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸದಾಶಿವ ನಗರ, ಬೆಳಗಾವಿ ಕಚೇರಿಯಲ್ಲಿ ಪಡೆದು, ಅಲ್ಲಿಯೇ ಸಲ್ಲಿಸಬಹುದು. ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.