ಉತ್ತಮ ಸಮಾಜಕ್ಕಾಗಿ

ಸಂಗೊಳ್ಳಿ ಉತ್ಸವ: ವ್ಯಾಪಕ ಪ್ರಚಾರಕ್ಕೆ ನಿರ್ಧಾರ

0

ಬೆಳಗಾವಿ: ಬೈಲಹೊಂಗಲ ತಾಲ್ಲೂಕು ಸಂಗೊಳ್ಳಿ ಗ್ರಾಮದಲ್ಲಿ ಇದೇ 12 ಹಾಗೂ 13ರಂದು ನಡೆಯಲಿರುವ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಸಂಬಂಧಿಸಿದಂತೆ ಪ್ರತಿವರ್ಷದಂತೆ ವ್ಯಾಪಕ ಪ್ರಚಾರವನ್ನು ಕೈಗೊಂಡು ಹೆಚ್ಚು ಜನರಿಗೆ ಮಾಹಿತಿ ತಲುಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗುರುನಾಥ ಕಡಬೂರ ತಿಳಿಸಿದರು.
ಸಂಗೊಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ(ಜ.2) ನಡೆದ ಪ್ರಚಾರ ಉಪಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ಸವದ ಕುರಿತು ಮುದ್ರಣ, ದೃಶ್ಯ ಮಾಧ್ಯಮಗಳ ಜತೆಗೆ ಸಾಮಾಜಿಕ ಜಾಲತಾಣದಲ್ಲೂ ಪ್ರಚಾರ ಕೈಗೊಳ್ಳಬೇಕು ಎಂದು ಸಮಿತಿಯ ಸದಸ್ಯರು ಸಲಹೆ ನೀಡಿದರು.
ಅದೇ ರೀತಿಯ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವ ಹಾಗೂ ಬೆಳವಡಿ ಉತ್ಸವದ ಬಗ್ಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸಲಾಗುತ್ತದೆ. ಅದೇ ರೀತಿ ಸಂಗೊಳ್ಳಿ ಉತ್ಸವದ ಬಗ್ಗೆಯೂ ಮಾಹಿತಿ ಪ್ರಕಟಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು.
ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಮೂಲಕ ಆ ಇಲಾಖೆಯ ನಿರ್ದೇಶಕರ ಗಮನಕ್ಕೆ ತರಲು ಸಭೆಯಲ್ಲಿ ನಿರ್ಧರಿಸಲಾಯಿತು.
ಉತ್ಸವದ ಪೋಸ್ಟರ್, ಬ್ಯಾನರ್‍ಗಳನ್ನು ಪ್ರತಿವರ್ಷದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಗುರುನಾಥ ಕಡಬೂರ ತಿಳಿಸಿದರು.
ಮಾಧ್ಯಮದವರು ಸಕಾಲಕ್ಕೆ ಸುದ್ದಿ ಕಳಿಸಲು ಅನುಕೂಲವಾಗುವಂತೆ ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ತೆರೆಯುವ ಅಗತ್ಯವಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಸಂಗೊಳ್ಳಿ ಉತ್ಸವದ ಬಗ್ಗೆ ನಾಡಿನ ಮೂಲೆ ಮೂಲೆಯ ಜನರಿಗೆ ಮಾಹಿತಿ ನೀಡಲು ಜಾಹೀರಾತು ಹಾಗೂ ಸುದ್ದಿಗಳನ್ನು ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಸಲಾಯಿತು.
ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾದ ಬಸವರಾಜ ಕೊಡ್ಲಿ, ಪ್ರಚಾರ ಉಪ ಸಮಿತಿ ಸದಸ್ಯರಾದ ಬಾಬುಸಾಬ್ ಖುದುನ್ನವರ, ರಾಯಪ್ಪ ಡಂಗೂರ, ಪರಪ್ಪ ಗಣಾಚಾರಿ, ಬಾಬು ಸಿಂಗಾಡಿ, ಬಸವರಾಜ ಕಮತ ಸೇರಿದಂತೆ ಮತ್ತಿತರ ಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.