ಉತ್ತಮ ಸಮಾಜಕ್ಕಾಗಿ

ದಲಿತ ಸಂಘಟನೆಗಳ ಪ್ರತಿಭಟನೆ

0

ಬೆಳಗಾವಿ: ಮಹಾರಾಷ್ಟ್ರದ ಕೋರೆಗಾಂವನಲ್ಲಿ ದಲಿತರ ಮೇಲೆ ನಡೆದ ಹಿಂಸಾಚಾರವನ್ನು ವಿರೋಧಿಸಿ ವಿವಿಧ ದಲಿತ ಸಂಘಟನೆಗಳು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ನೂರಾರು ದಲಿತ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಮೂಲಕ ಚೆನ್ನಮ್ಮ ವೃತ್ತಕ್ಕೆ ತಲುಪಿ ಮಹಾರಾಷ್ಟ್ರ ಸರಕಾರದ ವಿರುದ್ಧ ಘೊಷಣೆ ಕೂಗಿದರಲ್ಲದೇ ರಸ್ತೆಯ ಮೇಲೆ ಟಾಯರಗಳನ್ಮು ಸುಟ್ಟು ರಸ್ತೆ ತಡೆ ನಡೆಸಿದರು. ಇದರಿಂದ ಚೆನ್ನಮ್ಮ ವೃತ್ತದಲ್ಲಿ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿತ್ತು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ ಅವರನ್ನು ಮನವಿ ಸಲ್ಲಿಸಿ ದಲಿತರ ಮೇಲೆ ಹಿಂಸಾಚಾರ ನಡೆಸಿದವರನ್ನು ಶೀಘ್ರ ಬಂಧಿಸಬೇಕೆಂದು ಆಗ್ರಹಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.