ಉತ್ತಮ ಸಮಾಜಕ್ಕಾಗಿ

ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

0

ಬೆಳಗಾವಿ: ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಕಾರಣಾಂತರಗಳಿಂದ ಖಾಲಿಯಾದ ಗ್ರಾಮ ಪಂಚಾಯತ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರ ಆಯ್ಕೆ ಆಗಬೇಕಾಗಿರುತ್ತದೆ. ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆಯ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯತ ವ್ಯಾಪ್ತಿಗೆ ಸೇರಿರಬೇಕು.(ಈ ಕುರಿತು ರಹವಾಸಿ ಪ್ರಮಾಣ ಪತ್ರ ಲಗತ್ತಿಸಿರಬೇಕು), ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ (ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ರಹವಾಸಿ ಪ್ರಮಾಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪತ್ರ) 2018ರ ಜನವರಿ 1 ರಿಂದ 19 ರೊಳಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಜಿಲ್ಲಾಧಿಕಾರಿಗಳ ಕಚೇರಿ ಆವರಣ,ಬೆಳಗಾವಿ’’ಇವರಿಗೆ ಸಲ್ಲಿಸಬೇಕು.

ಮೀಸಲಾತಿ ಹಾಗೂ ಗ್ರಂಥಾಲಯಗಳ ವಿವರ:

ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮ ಪಂಚಾಯತಿ 3 `ಎ’(ಯೋಜನಾ ಅಭ್ಯರ್ಥಿ) ಬೆಳಗಾವಿ ತಾಲೂಕಿನ ಬೆಳವಟ್ಟಿ ಗ್ರಾಮ ಪಂಚಾಯತಿ ಸಾಮಾನ್ಯ ಅಭ್ಯರ್ಥಿ (ವiಹಿಳಾ ಅಭ್ಯರ್ಥಿ), ಬೈಲಹೊಂಗಲ ತಾಲೂಕಿನ ಬುಡ್ರಕಟ್ಟಿ ಗ್ರಾಮ ಪಂಚಾಯತಿ 3 `ಬಿ’ (ಅಂಗವಿಕಲ ಅಭ್ಯರ್ಥಿ) ಅಥಣಿ ತಾಲೂಕಿನ ಹಲ್ಯಾಳ ಗ್ರಾಮ ಪಂಚಾಯತಿ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ ಅಭ್ಯರ್ಥಿ), ರಾಯಬಾಗ ತಾಲೂಕಿನ ಜಲಾಲಪೂರ ಗ್ರಾಮ ಪಂಚಾಯತಿ 2 `ಎ’ ಈ ಪಂಚಾಯತಿಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಬೆಳಗಾವಿ ಕಚೇರಿ ದೂರವಾಣಿ ಸಂಖ್ಯೆ 0831-2424231 ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.