ಉತ್ತಮ ಸಮಾಜಕ್ಕಾಗಿ

ಜ. 7ರಂದು ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರ

0

ಬೆಳಗಾವಿ: ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಸಂಸ್ಥೆಯ ವತಿಯಿಂದ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಜನೇವರಿ 7 ರಿಂದ 11 ರವರೆಗೆ ನಗರದ ಜೈನ್ ಹೆರಿಟೇಜ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜನೇವರಿ 7 ರಂದು ಬೆಳಿಗ್ಗೆ ಮಧ್ಯಾಹ್ನ 2-30 ಗಂಟೆಗೆ ರಾಜ್ಯ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ರಾಜ್ಯ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಸಂತೋಷ ಲಾಡ್, ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ ಹಾಗೂ ಕಂದಾಯ ಸಚಿವರ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಸಂಭಾಜಿ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಲೋಕಸಭಾ ಸದಸ್ಯರಾದ ಸುರೇಶ ಅಂಗಡಿ, ಪ್ರಕಾಶ ಹುಕ್ಕೇರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಪ್ರಭಾಕರ ಕೋರೆ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ಶಾಸಕರು, ವಿಧಾನ ಸಭಾ ಸದಸ್ಯರು ಸೇರಿದಂತೆ ಜಿಪಂ ಹಾಗೂ ಮಹಾನಗರ ಪಾಲಿಕೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಧಿಕಾರಿಗಳ ಭಾಗವಹಿಸುವರು.

Leave A Reply

 Click this button or press Ctrl+G to toggle between Kannada and English

Your email address will not be published.