ಉತ್ತಮ ಸಮಾಜಕ್ಕಾಗಿ

ಪ್ರಕಟಣೆ

0

ಜ.11 ರಂದು ಕನ್ನಡ ಅನುಷ್ಠಾನದ ಪ್ರಗತಿ ಪರಶೀಲನಾ ಸಭೆ
ಬೆಳಗಾವಿ:  ್ಲ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜನೇವರಿ 11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಕನ್ನಡವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.6ರಂದು ಜನಸ್ಪಂದನಾ ಸಭೆ
ಬೆಳಗಾವಿ: ಬೆಳಗಾವಿ ತಾಲೂಕಿನ ಯರಮಳೆ ಗ್ರಾಮದ ಮಾರುತಿ ದೇಸಸ್ಥಾನದಲ್ಲಿ ಶನಿವಾರ (ಜನೇವರಿ.6) ರಂದು ಮುಂಜಾನೆ 11 ಗಂಟೆಗೆ ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಸಂಭಾಜಿ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜನಸ್ವಂದನಾ ಸಭೆ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡಯಕೊಳ್ಳಬೇಕೆಂದು ಬೆಳಗಾವಿಯ ತಹಶೀಲ್ದಾರ ಶ್ರೀಮತಿ ಮಂಜುಳಾ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿಕಲಚೇತನರಿಕಗೆ ನಿರುದ್ಯೋಗ ಭತ್ಯೆಗಾಗಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಬೆಳಗಾವಿ: : ್ಲ ಎಸ್.ಎಸ್.ಎಲ್.ಸಿ. ನಂತರದ ವಿದ್ಯಾರ್ಹತೆ ಹೊಂದಿರುವ 25 ರಿಂದ 45 ರ ವಯೋಮಾನದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗಕ್ಕಾಗಿ ನೊಂದಾಯಿಸಿಕೊಂಡ, ಮಾಸಿಕ ಪೋಷಣಾ ಭತ್ಯೆ ಪಡೆಯದಿರುವ ವಿಕಲಚೇತನರಿಕಗೆ ನಿರುದ್ಯೋಗ ಭತ್ಯೆಗಾಗಿ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ತಿತಿತಿ.ತಿeಟಜಿಚಿಡಿe oಜಿ ಜisಚಿbಟeಜ.ಞಚಿಡಿ.ಟಿiಛಿ.iಟಿ ನಲ್ಲಿ ಪೆಬ್ರವರಿ 4 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಮತ್ತು ತಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಭೌತಿಕವಾಗಿ ಎರಡು ಪ್ರತಿಗಳನ್ನು ಸಲ್ಲಸಬೇಕು. ಹೆಚ್ಚಿನ ಮಾಹಿತಿಗಾಗಿ : 0831-2476096 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಅಸುರಕ್ಷಿತ ; ಹಾಲು ಕ್ರಮಕ್ಕೆ ಸೂಚನೆ
ಬೆಳಗಾವಿ:  ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಸಂಗ್ರಹಿಸಿದ ನಾಲ್ಕು ಹಾಲಿನ ಮಾದರಿಯಲ್ಲಿ ಸಕ್ಕರೆ ಪ್ರಮಾಣ ಕಂಡುಬಂದಿದ್ದರಿಂದ ಅವು ಸಾರ್ವಜನಿಕರ ಸೇವನೆಗೆ ಅಸುರಕ್ಷಿತವಾಗಿದ್ದು, ಈ ಘಟಕಗಳÀ ವಿರುದ್ಧ ರಾಯಬಾಗ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಕ್ತ ಕ್ರಮ ಜರುಗಿಸಿ, ವರದಿ ಸಲ್ಲಿಸುವಂತೆ ಬೆಳಗಾವಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಂಕಿತ ಅಧಿಕಾರಿಗಳು ಸೂಚಿಸಿದ್ದಾರೆ.
ಡಿಸೆಂಬರ್ ಮಾಹೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 10 ಡೈರಿ ಹಾಲಿನ ಮಾದರಿ ಸಂಗ್ರಹಿಸಿ ವಿಶ್ಲೇಷಣೆಗೆ ಕಳುಹಿಸಲಾಗಿತ್ತು. ಅವುಗಳಲ್ಲಿ ರಾಯಬಾಗ ತಾಲೂಕಿನ ನಾಲ್ಕು ಡೈರಿಗಳಲ್ಲಿ ಸಕ್ಕರೆ ಪ್ರಮಾಣ ಕಂಡುಬಂದಿದೆ.

ಆ ಹಾಲಿನ ಘಟಕಗಳ ಮಾಲೀಕರ ವಿವರ:
ರಾಯಬಾಗ ತಾಲೂಕಿನ ಹಾರೂಗೇರಿ ಗ್ರಾಮದ ಮುರಸಿದ್ದ ಭೋಪಾಲ ಕಿಲಾರೆ ಮತ್ತು ಕುಮಾರ ಸಿದ್ದಪ್ಪ ಗಬ್ಬೆ ಹಾಗೂ ಹಿಡಕಲ್ ಗ್ರಾಮದ ಹರಿಜೆ ಡೈರಿ ಮತ್ತು ಮಂಜುನಾಥ ಎಚ್. ಕೊಕಟನೂರ ಈ ಮಾಲೀಕರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಬೆಳಗಾವಿ:  2017ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇಕಡ 70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2018ರ ಜನೇವರಿ 20 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ಅಪ್‍ಲೋಡ್ ಮಾಡಿದ ಎಲ್ಲಾ ದಾಖಲಾತಿಗಳ ಪ್ರತಿಯನ್ನು ವಿದ್ಯಾರ್ಥಿಗಳು ತಾವು ಅಧ್ಯಯನ ಮಾಡಿರುವ ಸಂಸ್ಥೆ, ಕಾಲೇಜು, ವಿಶ್ವವಿದ್ಯಾಲಯಗಳ ಮುಖ್ಯಸ್ಥರಿಂದ ದೃಢೀಕರಿಸಿ, ಆಯಾ ಸಂಸ್ಥೆ, ಕಾಲೇಜು, ವಿಶ್ವವಿದ್ಯಾಲಯಗಳಿರುವ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿಗೆ ಜನೇವರಿ 22 ರೊಳಗೆ ಸಲ್ಲಿಸಿ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಮಾಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಅಥವಾ ಸಹಾಯವಾಣಿ ಸಂಖ್ಯೆ: 080-65970004ಗೆ ಸಂಪರ್ಕಿಬಹುದಾಗಿದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬೆಳಗಾವಿ:  2017-18ನೇ IIIಖಿS, ಓIಖಿs, IISಇಖs, ಂIIಒS, ಓಐU, ISಒ, IIP, ಎIPಒಇಖ, SPಂ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನೇವರಿ 20 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ಅಥವಾ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 080-65970004 ನ್ನು ಸಂಪರ್ಕಿಸಬೇಕೆಂದು

ಸ್ಪರ್ಧಾ ಚೇತನ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಳಗಾವಿ: 2017-18ನೇ ಸಾಲಿನ ಸ್ಪರ್ಧಾ ಚೇತನ ಯೋಜನೆಯಡಿ ವಿಶೇಷ ಸಾಮಥ್ರ್ಯ, ಭಿನ್ನ ಸಾಮಥ್ರ್ಯ ವಿದ್ಯಾವಂತ ವ್ಯಕ್ತಿಗಳಿಗೆ ಐ.ಎ.ಎಸ್., ಕೆ.ಎ.ಎಸ್. ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿಸಲ್ಲಿಸುವ ದಿನವನ್ನು ವಿಸ್ತರಿಸಲಾಗಿದೆ.
ಪೆಬ್ರವರಿ 4 ರೊಳಗಾಗಿ ಅಭ್ಯರ್ಥಿಗಳು ತಮ್ಮ ತಾಲೂಕುಗಳ ತಾಲೂಕು ಪಂಚಾಯತಗಳಲ್ಲಿರುವ ವಿವಿದ್ಧೋದ್ದೇಶ ಕಾರ್ಯಕರ್ತರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ : 0831-2476096 ದೂರವಾಣಿ ಸಂಖ್ಯೆಯನ್ನು ಸಂರ್ಕಿಸಿಬೇಕೆಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ರಿಯಾಯಿತಿದರದ ಬಸ್ ಪಾಸ್‍ಗಳ ನವೀಕಣಕ್ಕಾಗಿ ಅರ್ಜಿ
ಬೆಳಗಾವಿ: ಜ2018ನೇ ಸಾಲಿಗಾಗಿ 1 ನೇ ಜನೇವರಿ ಡಿಸೆಂಬರ್ 31 ರವರೆಗೆ ಮಾನ್ಯತೆ ಇರುವಂತೆ, ವಿಕಲಚೇತನರು ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ನವೀಕರಸಿಬೇಕಾಗಿದ್ದು, ಹಾಲಿ 2017ನೇ ಸಾಲಿನಲ್ಲಿ ವಿತರಿಸಿರುವ ಪಾಸ್‍ಗಳನ್ನು ಪೆಬ್ರವರಿ 28 ರವರೆಗೆ ಮಾನ್ಯ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇವರು ಆದೇಶ ಹೊರಡಿಸಿದ್ದಾರೆ.
ಈ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಅರ್ಹ ವಿಕಲಚೇತನ ಫಲಾನುಭವಿಗಳು ಪೆಬ್ರವರಿ 28. ರೊಳಗಾಗಿ ಬೆಳಗಾವಿ ಸೇರಿದಂತೆ ಆಯಾ ತಾಲೂಕುಗಳಲ್ಲಿ ಸಂಬಂಧಪಟ್ಟ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ರೂ.660 ಗಳನ್ನು ಪಾವತಿಸಿ ವಿಕಲಚೇತನರ ರಿಯಾಯಿತಿ ಬಸ್ಸ ಪಾಸ್‍ಗಳನ್ನು ನವೀಕರಿಸಿಕೊಳ್ಳಬೇಕೆಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಯಲ್ಲಮ್ಮಾದೇವಿ ಜಾತ್ರೆಯ ನಿಮಿತ್ಯವಾಗಿ ಹೆಚ್ಚುವರಿ ಬಸ್ ಬಿಡುಗಡೆ
ಬೆಳಗಾವಿ:  ಡಿಸೆಂಬರ್ 31.2017 ರಿಂದ ಜನೇವರಿ 7 ರವರೆಗೆ ಸವದತ್ತಿಯ ಶ್ರೀ ಯಲ್ಲಮ್ಮಾದೇವಿ ಜಾತ್ರೆಯ ನಿಮಿತ್ಯವಾಗಿ ಗೋಕಾಕ, ಘಟಪ್ರಭಾ, ಅಥಣಿ, ಕಾಗವಾಡ, ನಿಪ್ಪಾಣಿ ಹಾಗೂ ರಾಯಬಾಗ ಸೇರಿದಂತೆ ಮುಂತಾದ ಸ್ಥಳಗಳಿಂದ ಶ್ರೀ ಯಲ್ಲಮ್ಮನ ಗುಡ್ಡಕ್ಕೆ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.8 ರಂದು ದಾರೋಳಿ ಗ್ರಾಮದ ಜನಸ್ಪಂನಾ ಸಭೆ
ಬೆಳಗಾವಿ:  ಖಾನಾಪೂರ ತಾಲೂಕಿನ ಜಾಂಬೋಟಿ ಹೋಬಳಿ ವ್ಯಾಪ್ತಿಯ ದಾರೋಳಿ ಗ್ರಾಮದ ಜನಸ್ಪಂನಾ ಸಭೆಯನ್ನು ಸ್ಥಳೀಯ ಮಾರಾಠಿ ಶಾಲೆಯಲ್ಲಿ ಖಾನಾಪುರ ತಾಲೂಕಿನ ಶಾಸಕರಾದ ಅರವಿಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜನೇವರಿ 8 ರಂದು ಬೆಳಿಗ್ಗೆ 11: 30ಕ್ಕೆ ಆಯೋಜಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡಿಕೊಳ್ಳಬೇಕೆಂದು ಖಾನಾಪೂರ ತಾಲೂಕಿನ ತಹಶೀಲ್ದಾರ ಎಸ್.ಬಿ. ಉಳ್ಳೇಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.