ಉತ್ತಮ ಸಮಾಜಕ್ಕಾಗಿ

ಪ್ರಕಟಣೆ

0

ಜ.10 ರಂದು ಖಾನಾಪೂರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಬೆಳಗಾವಿ: ಖಾನಾಪೂರ ಸಮೀಪದ ದೇವಲತ್ತಿ ಗ್ರಾಮದಲ್ಲಿ ಜನೇವರಿ 10 ರಂದು ಖಾನಾಪೂರ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಡಾ. ರತ್ನಶೀಲಾ ಗುರಡ್ಡಿ ಅವರು ಆಯ್ಕೆಯಾಗಿದ್ದಾರೆ. ಜ.10 ರಂದು ಸಮ್ಮೇಳನದ ಉದ್ಘಾಟನಾ ಸಮಾರಂಭ ಜರುಗುವುದು. ಧ್ವಜಾರೋಹಣ,
ಮೆರವಣಿಗೆ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಸಮಸ್ತ ಕನ್ನಡಿಗರು ಕನ್ನಡದ ನಾಡು-ನುಡಿಯ ಈ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಂಗಲಾ ಮೆಟಗುಡ್ಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಘಟಿಕೋತ್ಸವ ನಾಳೆ
ಬೆಳಗಾವಿ:  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 17ನೇ ವಾರ್ಷಿಕ ಘಟಿಕೋತ್ಸವ ಜನೇವರಿ 9 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.
ರಾಜ್ಯ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹಾಗೂ ರಾಜ್ಯಪಾಲರಾದ ವಜುಬಾಯಿ. ಆರ್. ವಾಲಾ ಅವರು ಸಮಾರಂಭದಲ್ಲಿ ಅದ್ಯಕ್ಷತೆ ವಹಿಸಿ, ಉದ್ಘಾಟನೆ ನೆರವೇರಿಸುವರು. ಸಹಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವರಾದ
ಬಸವರಾಜ ರಾಯರಡ್ಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಪ್ರೊ. ಅನಿಲ.ಡಿ. ಸಹಸ್ರಬುದ್ಧೆ ಅವರು ಘಟಿಕೋತ್ಸವ ಭಾಷಣ ಮಾಡುವರು.
ಘಟಿಕೋತ್ಸವದಲ್ಲಿ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಗಳು ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಎ.ಎಸ್. ಕಿರಣಕುಮಾರ ಹಾಗೂ ಮಹಿಂದ್ರಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಆನಂದ ಮಹಿಂದ್ರಾ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಗೌರವ ಪದವಿ ಪ್ರದಾನ ಮಾಡಲಾಗುವುದು.

ರಾಜ್ಯಪಾಲ ವಜುಬಾಯಿ ವಾಲಾ ಜಿಲ್ಲಾ ಪ್ರವಾಸ
ಬೆಳಗಾವಿ:  ರಾಜ್ಯಪಾಲರಾದ ವಜುಬಾಯಿ ವಾಲಾ ಅವರು ಜ.9 ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಉದ್ಘಾಟಕರಾಗಿ ಪಾಲ್ಗೊಳ್ಳುವರು. ಸಂಜೆ 6:10ಕ್ಕೆ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ನಿರುಪಯುಕ್ತ ಕೊಳವೆ ಬಾವಿಗಳನ್ನು ಮುಚ್ಚಿಸಲು ಸೂಚನೆ
ಬೆಳಗಾವಿ: ಬೆಳಗಾವಿ ತಾಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಸರ್ಕಾರಿ, ಖಾಸಗಿ ಜಮೀನು, ಅಂಗನವಾಡಿ, ಶಾಲೆಗಳು ಹಾಗೂ ಇನ್ನಿತರೆಡೆ ಇರುವ ಕುಡಿಯುವ ನೀರಿನ ಬೋರವೆಲ್, ಕೊಳವೆ ಬಾವಿಗಳನ್ನು ಕೊರೆಯಿಸುವುದು ಹಾಗೂ ವಿಫಲವಾದ ಬೋರವೆಲ್, ಕೊಳವೆ ಬಾವಿಗಳನ್ನು ಮುಚ್ಚಿಸುವ ಕುರಿತು, ಅರ್ಜಿಗಳನ್ನು ಸಲ್ಲಿಸುವ, ಪರವಾನಿಗೆ ಪಡೆಯುವ ಕುರಿತು ಯಾವುದೇ ಮಾಹಿತಿ ಅಗತ್ಯವಿದ್ದಲ್ಲಿ ಸಾರ್ವಜನಿಕರು ಈ ಕೆಳಕಂಡ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ.
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಬೆಳಗಾವಿ. ದೂ: 0831-2447322 ಹಾಗೂ ತಹಶೀಲ್ದಾರ ಕಾರ್ಯಾಲಯ, ಬೆಳಗಾವಿ. ದೂ: 0831-2407286 ಮತ್ತು ನಗರ ವಲಯದ ಮಾಹಿತಿಗಾಗಿ ಮಹಾನಗರ ಪಾಲಿಕೆ, ಬೆಳಗಾವಿ. ದೂ: 0831-24075300 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರಿಗೆ ಯಾವುದೇ ಸ್ಥಳಗಳಲ್ಲಿ ವಿಫಲವಾದ ತೆರೆದ ಬೋರವೆಲ್ ಅಥವಾ ಕೊಳವೆ ಬಾವಿಗಳು ಕಂಡುಬಂದಲ್ಲಿ ಅನಾಹುತಗಳನ್ನು ತಪ್ಪಿಸಲು ಮೇಲ್ಕಾಣಿಸಿದ ಕಚೇರಿಗಳಿಗೆ ದೂರವಾಣಿ ಮುಖಾಂತರ ಮಾಹಿತಿ ನೀಡಬಹುದು ಎಂದು ಬೆಳಗಾವಿ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.18 ರಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಬೆಳಗಾವಿ:  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಬೆಂಗಳೂರಿನ ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾಲಯದಲ್ಲಿ ಜನೇವರಿ 18 ಮತ್ತು 19 ರಂದು ಅಕಾಡೆಮಿಯ ದಶಮಾನೋತ್ಸವ ಸಮ್ಮೇಳನವನ್ನು ಆಯೋಜಿಸಲಾಗಿದೆ.
‘ಮಾನವ ಕುಲದ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ವಿಷಯದ ಮೇಲೆ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನದ ಪ್ರತಿನಿಧಿಯಾಗಿ ನೋಂದಾಯಿಸಿಕೊಳ್ಳಲು ಮತ್ತು ಸಂಶೋಧನಾ ಸಾರಾಂಶವನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜನೇವರಿ 10 ರವರೆಗೆ ವಿಸ್ತರಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ.
ಸಮ್ಮೇಳನದ ಬಗ್ಗೆ ಹೆಚ್ಚಿನ ಮಾಹಿತಿಗೆ ಅಕಾಡೆಮಿ ವೆಬ್‍ಸೈಟ್:www.kstaconference.com ಅಥವಾ ಡಾ. ಎ.ಎಂ. ರಮೇಶ, ಹಿರಿಯ ವೈಜ್ಞಾನಿಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ. ದೂ: 080-26711160, 9845258894 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಸಹಕಾರ ಸಂಘಗಳಲ್ಲಿ ಬಡ್ತಿ ಪಡೆಯಲು ಸಹಕಾರ ಡಿಪ್ಲೊಮಾ ಪಡೆಯುವುದು ಕಡ್ಡಾಯ
ಬೆಳಗಾವಿ: ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ನಿಯಮಗಳು, 2017 ರ ನಿಯಮ 17 (2) ಎ ಮತ್ತು ಬಿ ಉಪಬಂಧಗಳ ಪ್ರಕಾರÀ ರಾಜ್ಯದ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ತಮ್ಮ ಹುದ್ದೆಯಲ್ಲಿ ಬಡ್ತಿ ಪಡೆಯಬೇಕಾದರೆ ನಿಗದಿತ ಕನಿಷ್ಠ ಅವಧಿಯ ಸೇವೆಯ ಜೊತೆಗೆ ಸಹಕಾರ ವಿಷಯದಲ್ಲಿ ಡಿಪ್ಲೊಮಾ ಪಡೆದಿರಬೇಕಾದುದು ಕಡ್ಡಾಯವಾಗಿದೆ (ಪಡೆಯದೇ ಇದ್ದಲ್ಲಿ ಬಡ್ತಿಗೆ ಪರಿಗಣಿಸತಕ್ಕದ್ದಲ್ಲ).
ಇದರಿಂದ ವಿನಾಯಿತಿ ಪಡೆಯಲು ಅವಕಾಶವಿಲ್ಲ. ಆದುದರಿಂದ ಬೆಳಗಾವಿ ಜಿಲ್ಲೆಯ ಎಲ್ಲ ವಿಧದ ಸಹಕಾರ ಸಂಘಗಳ ಸಿಬ್ಬಂದಿ ಸಹಕಾರ ಮಹಾಮಂಡಳ ನಡೆಸುವ ಹಾಗೂ ಜನೇವರಿಯಿಂದ ಪ್ರಾರಂಭವಾಗುವ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಲು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಸಲಹೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರÉೀಟಿವ್ ಮ್ಯಾನೇಜ್‍ಮೆಂಟ್, ಮಹಾನಗರ ಪಾಲಿಕೆ ಕಟ್ಟಡ, 1ನೇ ಮಹಡಿ. “ಡಿ” ಬ್ಲಾಕ್, ಗೋವಾವೇಸ್, ಬೆಳಗಾವಿ. ಅಥವಾ ದೂ: 0831-2466317. 8884259545 ಗೆ ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

Leave A Reply

 Click this button or press Ctrl+G to toggle between Kannada and English

Your email address will not be published.