ಉತ್ತಮ ಸಮಾಜಕ್ಕಾಗಿ

tarun kranti:ಫಿರೋಜ್ ಶೇಠ ಅಧಿಕಾರ ಸ್ವೀಕಾರ

The decision to distribute 160 acres in the city

0

ಬೆಳಗಾವಿ:(news belgaum) (tarun kranti) ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹೊಸ ಬಡಾವಣೆ ನಿರ್ಮಿಸಲು ಕಣಬರ್ಗಿಯ ಯೋಜನೆ ಸಂಖ್ಯೆ 61 ಪ್ರದೇಶದಲ್ಲಿ 160 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಫಿರೋಜ್ ಶೇಠ ಅವರು ತಿಳಿಸಿದರು.
ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಸಭಾಂಗಣದಲ್ಲಿ ಮಂಗಳವಾರ (ಫೆ.20) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ, ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ 160 ಎಕರೆ ಪ್ರದೇಶದಲ್ಲಿ ಶೀಘ್ರ ಹೊಸ ಬಡಾವಣೆ ನಿರ್ಮಿಸಿ ಪ್ಲಾಟ್‍ಗಳನ್ನು 50:50 ವಿಧಾನದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.News Belgaum-ಫಿರೋಜ್ ಶೇಠ ಅಧಿಕಾರ ಸ್ವೀಕಾರ ನಗರದಲ್ಲಿ 160 ಎಕರೆ ಜಾಗೆ ಹಂಚಿಕೆ ಮಾಡಲು ನಿರ್ಧಾರ
ಸಚಿವನಾಗಬೇಕೆಂಬ ಯಾವುದೇ ಆಕಾಂಕ್ಷೆ ನನಗೆ ಇಲ್ಲ. ಬೆಳಗಾವಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕೆಂಬುದು ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಬೇಕೆಂದು ನಾನು ಹತ್ತು ವರ್ಷಗಳಿಂದ ಪ್ರಯತ್ನಿಸುತ್ತಿದ್ದೆ. ಇದನ್ನು ಮುಖ್ಯಮಂತ್ರಿಗಳು ಮನಗಂಡು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ನನಗೆ ನೀಡಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ನಗರದ ಬಾಪಟ್‍ಗಲ್ಲಿ ಕ್ರಾಸ್‍ನಲ್ಲಿ ರೂ. 4.5 ಕೋಟಿ ವೆಚ್ಚದಲ್ಲಿ 130 ಕಾರ್‍ಗಳನ್ನು ಪಾರ್ಕ್ ಮಾಡಲು ಅನುಕೂಲವಾಗುವಂತೆ ಮಲ್ಟಿ ಲೆವಲ್ ಕಾರ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಫಿರೋಜ್ ಶೇಠ ತಿಳಿಸಿದರು.
ಕೋಟೆ ಕೆರೆಯ ಆವರಣದಲ್ಲಿ ನಿರ್ಮಿಸಿರುವ ಧ್ವಜಸ್ತಂಭವು 110 ಮೀ. ಎತ್ತರ ಇದ್ದು, ದೇಶದ ಅತ್ಯಂತ ಎತ್ತರದ ಧ್ವಜ ಸ್ತಂಭವಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು ಫೆ.24 ರಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ಉದ್ಘಾಟನೆ ಮಾಡಿಸಲು ಪ್ರಯತ್ನಿಸಲಾಗುತ್ತಿದೆ. ಅದು ಸಾಧ್ಯವಾಗದಿದ್ದರೆ ಶೀಘ್ರದಲ್ಲೇ ಧ್ವಜಸ್ತಂಭವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ಕುರೇರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಿ.ಡಬ್ಲೂ. ಶಕೀಲ ಅಹ್ಮದ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಅಧಿಕಾರ ಸ್ವೀಕಾರ:
ಮಂಗಳವಾರ ಬೆಳಿಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಫಿರೋಜ್ ಶೇಠ ಅವರು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರಿಂದ ಅಧಿಕಾರ ಸ್ವೀಕರಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಪೊಲೀಸ್ ಆಯುಕ್ತರಾದ ಡಿ.ಸಿ. ರಾಜಪ್ಪ, ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ಕುರೇರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಿ.ಡಬ್ಲೂ. ಶಕೀಲ ಅಹ್ಮದ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.The decision to distribute 160 acres in the city /

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.