ಉತ್ತಮ ಸಮಾಜಕ್ಕಾಗಿ

ಜಿಲ್ಲೆಯಲ್ಲಿ ಜಿಲ್ಲಾ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಘಟಕ ತಂಡ ರಚನೆ

The District observer Survey and Advisory Unit team is formed in the district

0

ಬೆಳಗಾವಿ:(news belagavi ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಈಗಾಗಲೇ ಹಲವು ಬೆಳೆಗಳ ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದಾರೆ. ಸದ್ಯ 30 ರಿಂದ 45 ದಿನಗಳ ಬೆಳೆಗಳಿವೆ. ಬೆಳೆಗಳಿಗೆ ಅಲ್ಲಲ್ಲಿ ಕೀಟ ಮತ್ತು ರೋಗಗಳ ಭಾದೆ ಕಂಡು ಬರುತ್ತಿದ್ದು, ಅವುಗಳ ನಿರ್ವಹಣೆಯ ಮಾಹಿತಿಯನ್ನು ರೈತ ಬಾಂಧವರಿಗೆ ತಲುಪಿಸುವುದು ಅತ್ಯಂತ ಅವಶ್ಯಕವಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೃಷಿ ಇಲಾಖೆ, ಧಾರವಾಡ ಕೃಷಿ ವಿಶ್ವವಿದ್ಯಾಲಯ, ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಹಾಗೂ ತುಕ್ಕಾನಟ್ಟಿ ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳನ್ನೊಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿದೆ. ನಾಲ್ಕು ತಂಡಗಳು ಜಿಲ್ಲೆಯ ಹತ್ತು ತಾಲೂಕುಗಳಲ್ಲಿ 10 ದಿನಗಳಿಗೊಮ್ಮೆ ಸರ್ವೇಕ್ಷಣೆ ಕೈಗೊಂಡು ವಿವಿಧ ಬೆಳೆಗಳಿಗೆ ತಗುಲಿರುವ ಕೀಟ ಮತ್ತು ರೋಗಗಳ ಪರಿಶೀಲನೆ ಕ್ಷೇತ್ರಮಟ್ಟದಲ್ಲಿ
ಕೈಗೊಂಡು, ಪೀಡೆಗಳ ನಿರ್ವಹಣೆಯ ಬಗ್ಗೆ ಕ್ರಮಕೈಗೊಳ್ಳಲು ಕ್ಷಿಪ್ರವಾಗಿ ರೈತ ಬಾಂಧವರಿಗೆ ತಿಳಿಸಲು ಸೂಕ್ತ ಕ್ರಮಕೈಗೊಳ್ಳಲಾಗಿದೆ.

ಈ ನಿಟ್ಟಿನಲ್ಲಿ  ಮೊದಲ ಸರ್ವೇ ಕಾರ್ಯದ ಸಭೆಯನ್ನು ಜಂಟಿ ಕೃಷಿ ನಿರ್ದೇಶಕರಾದ ಜಿಲಾನಿ. ಎಚ್. ಮೊಕಾಶಿ ಅವರ ಅಧ್ಯಕ್ಷತೆಯಲ್ಲಿ
ಜರುಗಿತು. ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಎಚ್.ಡಿ. ಕೋಳೇಕರ, ಎಲ್.ಐ. ರೂಡಗಿ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಮತ್ತಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳು ಹಾಗೂ ತುಕ್ಕಾನಟ್ಟಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು. ಸಭೆಯ ನಂತರ ನಾಲ್ಕು ತಂಡದ ವಿಜ್ಞಾನಿಗಳು ಜಿಲ್ಲೆಯ ಹತ್ತು
ತಾಲೂಕುಗಳಿಗೆ ಭೇಟಿ ನೀಡಿ ಬೆಳೆಗಳಿಗೆ ತಗಲಿರುವ ಕೀಟ ಹಾಗೂ ರೋಗಗಳ ಸರ್ವೇಯನ್ನು ಕೈಗೊಂಡರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.