ಉತ್ತಮ ಸಮಾಜಕ್ಕಾಗಿ

ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ಜು.16 ರಿಂದ ಇಂದ್ರಧನುಷ್ ನಗರ ಲಸಿಕಾ ಅಭಿಯಾನ

The District Working Committee meeting convened the Indradhansh Urban Lacika Campaign from July 16

0

ಬೆಳಗಾವಿ:  (news belagavi)  ಇಂದ್ರಧನುಷ್ ನಗರ ಲಸಿಕಾ ಅಭಿಯಾನ ಮೂರು ಹಂತಗಳಲ್ಲಿ ನಡೆಯಲಿದ್ದು, ಜುಲೈ 16 ರಿಂದ ಮೊದಲ ಹಂತದ ಲಸಿಕಾ ಅಭಿಯಾನ ಜರುಗಲಿದೆ. ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಅಭಿಯಾನದ ಯಶಸ್ಸಿಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಸೂಚನೆ ನೀಡಿದರು.

ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ಜು.16 ರಿಂದ ಇಂದ್ರಧನುಷ್ ನಗರ ಲಸಿಕಾ ಅಭಿಯಾನ- Tarun kranti 1

ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಇಂದ್ರಧನುಷ್ ನಗರ ಲಸಿಕಾ ಅಭಿಯಾನದ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಪಡೆಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜುಲೈ 16 ರಿಂದ 20 ರವರೆಗೆ ಮೊದಲ ಹಂತ, ಆಗಸ್ಟ್ 13 ರಿಂದ 18 ರವರೆಗೆ ಎರಡನೇ ಹಂತ ಹಾಗೂ ಸೆಪ್ಟೆಂಬರ್ 10 ರಿಂದ 15 ರವರೆಗೆ ಮೂರನೇ ಹಂತದ ಇಂದ್ರಧನುಷ್ ನಗರ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ಅಭಿಯಾನದ ಕುರಿತು ನಗರದ ಪ್ರಮುಖ ಸ್ಥಳಗಳು ಹಾಗೂ ಕೊಳಚೆ ಪ್ರದೇಶಗಳಲಿಯೂ ಸಹ ಪ್ಲೆಕ್ಸ್‍ಗಳನ್ನು ಅಳವಡಿಸಬೇಕು. ಭಿತ್ತಿಪತ್ರಗಳನ್ನು ವಿತರಿಸಬೇಕು. ಲಸಿಕಾ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಸೂಚಿಸಿದರು.

ಮಕ್ಕಳು ಹಾಗೂ ಪೋಷಕರಲ್ಲಿ ಲಸಿಕೆಯಿಂದ ಆಗುವ ಪ್ರಯೋಜನಗಳು ಹಾಗೂ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಲಸಿಕೆಯ ಬಗ್ಗೆ ತಿಳಿಹೇಳಬೇಕು. ಅಭಿಯಾನದ ಜಾಗೃತಿಗಾಗಿ ನಗರ ಪ್ರದೇಶಗಳಲ್ಲಿ ಜಾಥಾ ಕಾರ್ಯಕ್ರಮ ಆಯೋಜಿಸಬೇಕೆಂದು ಹೇಳಿದರು.

ನಗರ ಲಸಿಕಾ ಅಭಿಯಾನ ಕಾರ್ಯಕ್ರಮದ ಬಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಐ.ಇ.ಸಿ ಫಲಕಗಳನ್ನು ಅಳವಡಿಸಿಕೊಂಡು, ಕಾರ್ಯಕ್ರಮದ ದಿನಗಳಂದು ಲಸಿಕಾ ಕೇಂದ್ರ ತೆರೆದು ಲಸಿಕೆ ನೀಡಬೇಕು. ಜಿಲ್ಲಾಸ್ಪತ್ರೆಯಲ್ಲಿ ವ್ಯಾಕ್ಸಿನ್ಸ್ ಮತ್ತು ಲಾಜಿಸ್ಟಿಕ್ಸ್ ಲಭ್ಯತೆಯ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಔಷಧ ವಿತರಕರೊಂದಿಗೆ ಚರ್ಚಿಸಿ, ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ನಗರ ಲಸಿಕಾ ಕಾರ್ಯಕ್ರಮದ ಕುರಿತು ಆಸ್ಪತ್ರೆಯ ಮುಂದೆ ಹಾಗೂ ಲಸಿಕಾ ಕೇಂದ್ರಗಳಲ್ಲಿ ಪೋಸ್ಟ್ ಹಾಗೂ ಬ್ಯಾನರ್‍ಗಳನ್ನು ಅಳವಡಿಸಬೇಕೆಂದು ತಿಳಿಸಿದರು.

ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದೆ ಅಭಿಯಾನವನ್ನು ಸೂಕ್ತವಾಗಿ ನಡೆಸಬೇಕು. ಲಸಿಕೆ ಅಭಿಯಾನದ ಸಂದರ್ಭದಲ್ಲಿ ಬಿಟ್ಟು ಹೋದ ಮಕ್ಕಳನ್ನು ಗುರುತಿಸಿ, ನಂತರ ಅವರಿಗೂ ಸಹ ಕಡ್ಡಾಯವಾಗಿ ಲಸಿಕೆಯನ್ನು ನೀಡಬೇಕೆಂದು ಸೂಚಿಸಿದರು.

ವಿವಿಧ ಇಲಾಖೆಗಳು ಅಭಿಯಾನದಲ್ಲಿ ವಹಿಸಬೇಕಾದ ಪಾತ್ರ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಮಾತನಾಡಿ, ಶಿಕ್ಷಣ ಇಲಾಖೆಯಿಂದ ಎಲ್ಲ ಶಾಲೆಗಳಿಗೆ ಸುತ್ತೋಲೆಯನ್ನು ಹೊರಡಿಸಿ, ಪ್ರಾರ್ಥನಾ ಸಮಯದಲ್ಲಿ ಮಕ್ಕಳಿಗೆ ಇಂದ್ರಧನುಷ್ ಲಸಿಕಾ ಅಭಿಯಾನದ ಕುರಿತು ಜಾಗೃತಿ ಮೂಡಿಸಬೇಕು. ಈ ಬಗ್ಗೆ ಶಾಲೆಗಳಿಂದ ಫೋಟೋ ಸಹಿತ ವರದಿಯನ್ನು ಹಿರಿಯ ಅಧಿಕಾರಿಗಳು ಪಡೆಯಬೇಕೆಂದು ಸೂಚನೆ ನೀಡಿದರು.

ಆರ್ ಸಿಎಚ್‍ಒ ಐ.ಪಿ. ಗಡಾದ ಅವರು ಇಂದ್ರಧನುಷ್ ನಗರ ಲಸಿಕಾ ಅಭಿಯಾನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅಪ್ಪಾಸಾಹೇಬ ನರಟ್ಟಿ, ಎಡಿಎಚ್‍ಒ ಎಸ್.ವಿ. ಮುನ್ಯಾಳ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.