ಉತ್ತಮ ಸಮಾಜಕ್ಕಾಗಿ

ವಾಸಿಸುವವನೇ ಮನೆ ಒಡೆಯ: ತರಬೇತಿ ಕಾರ್ಯಾಗಾರ

The dweller is the owner of the house: training Workshop

0

ಬೆಳಗಾವಿ: (news belagavi ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ತಾಂಡಾಗಳ ಜನರು ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಎಸ್. ಕರ್ಕಿ ಅವರು ಹೇಳಿದರು.

ರಾಮದುರ್ಗ ತಾಲೂಕು ಪಂಚಾಯತ ಸಭಾಭವನದಲ್ಲಿ ಜು.11 ರಂದು “ವಾಸಿಸುವವನೇ ಮನೆ ಒಡೆಯ” ತಾಂಡಾ ವಿಕಾಸ ಸಮಿತಿಯ ಸದಸ್ಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ಇಚ್ಛಿಸುವ ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ಮದುವೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ ರೂ.50,000 ಸಹಾಯಧನ ನೀಡಲಾಗುವುದು. ಹಾಗೂ ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಪ.ಜಾತಿ/ಪ.ಪಂಗಡ ಜೋಡಿಗೆ ರೂ.2000/-ಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ತಾಂಡಾ ನಿಗಮದ ಮುಖ್ಯ ಸಂಪನ್ಮೂಲ ವ್ಯಕ್ತಿ ಗಂಗಾಧರ ಲಮಾಣಿ ಮಾತನಾಡಿ, ರಾಮದುರ್ಗ ತಾಲೂಕಿನಲ್ಲಿ ಒಟ್ಟು 18 ತಾಂಡಾಗಳಿದ್ದು, ಹಲವು ದಶಕಗಳಿಂದ ಸಮಾಜ ಬಾಂಧವರು ಅಲ್ಲಿಯೇ ವಾಸವಾಗಿದ್ದಾರೆ. ಆದರೆ ಅವರೆಲ್ಲರಿಗೂ ಇದುವರೆಗೆ ಹಕ್ಕು ಪತ್ರಗಳು ದೊರಕಿರುವುದಿಲ್ಲ ಎಂದು ಹೇಳಿದರು.

ತಾಂಡಾದ ಕೆಲವರು ಸರಕಾರಿ ಜಮೀನಿನಲ್ಲಿ ವಾಸವಾಗಿದ್ದರೆ, ಇನ್ನೂ ಕೆಲವರು ಖಾಸಗಿ ಜಮೀನಿನಲ್ಲಿ ವಾಸವಾಗಿರುತ್ತಾರೆ. ಹೀಗಾಗಿ ಹಕ್ಕು ಪತ್ರ ಪಡೆಯಲು ನಾಯಕ್, ಕಾರಭಾರಿ, ಡಾವ್, ಸಂಚಾಲಕ ಹಾಗೂ ಸಹ ಸಂಚಾಲಕರು ತಾಂಡಾದಲ್ಲಿನ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಯಾವುದೇ ತಪ್ಪಿಲ್ಲದಂತೆ ಅರ್ಜಿ ನಮೂನೆ ಭರ್ತಿ ಮಾಡಬೇಕು ಎಂದರು.

“ವಾಸಿವವನೇ ಮನೆ ಒಡೆಯ” ಯೋಜನೆಯ ಹಕ್ಕು ಪತ್ರವನ್ನು ಪಡೆಯಲು ಸರ್ಕಾರಿ ಜಮೀನಿನಲ್ಲಿ ವಾಸಮಾಡುತ್ತಿರುವವರು ಅರ್ಜಿ ನಮೂನೆ 3ಸಿ ಯನ್ನು ಅಧಿಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿ ತಾಲೂಕು ದಂಡಾಧಿಕಾರಿಗಳಿಗೆ ಹಾಗೂ ಖಾಸಗಿ ಜಮೀನಿನಲ್ಲಿ ವಾಸ ಮಾಡುತ್ತಿರುವವರು ಅರ್ಜಿ ನಮೂನೆ 2ಎಫ್ ಅನ್ನು ಅಧಿಕೃತ  ದಾಖಲೆಗಳೊಂದಿಗೆ ಭರ್ತಿ ಮಾಡಿ ಉಪವಿಭಾಗಾಧಿಕಾರಿಗಳು ಇವರಿಗೆ
ಸಾಮೂಹಿಕವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಕ್ಷೇತ್ರ ಅಭಿವೃದ್ಧಿ ಸಹಾಯಕ ಬಾಲು. ಆರ್. ಚವ್ಹಾಣ, ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಶಂಕರ ರಾಠೋಡ, ತಾಲೂಕು ಪಂಚಾಯತ ಸದಸ್ಯರಾದ ವಾಸು ಲಮಾಣಿ, ಕೃಷ್ಣ ರಾಠೋಡ, ಸಮಾಜದ ಮುಖಂಡರಾದ ಸೋಮು ಪೂಜಾರ, ಕೃಷ್ಣ ಚವ್ಹಾಣ, ಶ್ರೀಮತಿ ಭಾಗ್ಯಶ್ರೀ ಜಾಧವ, ವೆಂಕಟೇಶ ರಾಠೋಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.