ಉತ್ತಮ ಸಮಾಜಕ್ಕಾಗಿ

tarun kranti:ಜೆಡಿಎಸ್ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆ ಏರಲಿದೆ ಎಂದು

The JDS is going to be the power of power by winning the most seats

0

ಧಾರವಾಡ:(news belgaum)(tarun kranti) ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಯಾವ ಪಕ್ಷದ ನೆರವೂ ಇಲ್ಲದೇ ಅಧಿಕಾರದ ಗದ್ದುಗೆ ಏರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

News Belgaum-ಜೆಡಿಎಸ್ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ

ಈಗಾಗಲೇ ಜೆಡಿಎಸ್ ಮೊದಲ ಹಂತದಲ್ಲಿ 151 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಲವರಿಗೆ ಅಸಮಾಧಾನವಾಗಿರುವುದು ಸಹಜ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲವನ್ನೂ ಸರಿಪಡಿಸಲಾಗುವುದು ಎಂದರು. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯಾರಿಗೂ ಕಾಯುವ ಅವಶ್ಯಕತೆಯೂ ನಮಗಿಲ್ಲ. ಅದಕ್ಕಾಗಿಯೇ ನಾವು ನಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದೇವೆ. ಇನ್ನು ಕೆಲವು ಸಣ್ಣ ಪುಟ್ಟ ಬದಲಾವಣೆ ಮಾಡಿ ಇನ್ನುಳಿದ ಕ್ಷೇತ್ರಗಳಿಗೂ ಆದಷ್ಟು ಬೇಗನೇ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದರು.

ಇಲ್ಲಿನ ಕಲ್ಯಾಣನಗರದಲ್ಲಿರುವ ಕವಿ ಡಾ.ಚೆನ್ನವೀರ ಕಣವಿ ಅವರ ಮನೆಗೆ ಸಂಜೆ ಭೇಟಿ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ನೆನಪಿನಲ್ಲಿ ನೀಡುವ ಸಾಹಿತ್ಯ ಬಂಗಾರ ಪ್ರಶಸ್ತಿ ಪ್ರದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬರುವ ದಿನಗಳಲ್ಲಿ ಮತ್ತೇ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದ ಕುಮಾರಸ್ವಾಮಿ, ನಿಖಿಲ್ ಸಿನಿಮಾ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಕುಟುಂಬದಿಂದ ಕೇವಲ ಇಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಪುನುರುಚ್ಛರಿಸಿದರು.
ಶಾಸಕರಾದ ಮಧು ಬಂಗಾರಪ್ಪ, ಎನ್.ಎಚ್.ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಈ ಸಂದರ್ಭದಲ್ಲಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.