ಉತ್ತಮ ಸಮಾಜಕ್ಕಾಗಿ

ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರಿಂದ ಹೊಸದಾಗಿ ನಿರ್ಮಾಣವಾದ ಎನ್ ಸಿ ಸಿ ಕಟ್ಟಡ ಉದ್ಘಾಟನೆ

The newly constructed NCC building was inaugurated by Higher Education Minister GT Deve Gowda

0

ಬೆಂಗಳೂರು: (news belagavi)  ನಗರದ ಹೊಸ ಹಳ್ಳಿಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಎನ್‍ಸಿಸಿ ತರಬೇತಿ ಕೇಂದ್ರವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಉದ್ಘಾಟಿಸಿದರು.

ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರಿಂದ ಹೊಸದಾಗಿ ನಿರ್ಮಾಣವಾದ ಎನ್ ಸಿ ಸಿ ಕಟ್ಟಡ ಉದ್ಘಾಟನೆ- Tarun kranti

ಮುಖ್ಯಮಂತ್ರಿ ಕುಮಾರಸ್ವಾಮಿ ಪರವಾಗಿ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ನೂತನ ಕಟ್ಟಡ ಉದ್ಘಾಟಿಸಿ ಎನ್‍ಸಿಸಿ ಕೆಡೆಟ್‍ಗಳು ಮತ್ತು ಎನ್‍ಸಿಸಿ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಅಭಿವೃದ್ಧಿಯಲ್ಲಿ ಯುವಕರನ್ನು ತರಬೇತಿಗೊಳಿಸುವ ಎನ್‍ಸಿಸಿ ಕಾರ್ಯವನ್ನು ಶ್ಲಾಘಿಸಿದರು.

ರಾಜ್ಯ ಸರ್ಕಾರ ನೀಡಿರುವ ಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ಕಟ್ಟಡ ಹಾಗೂ ಮೂಲ ಸೌಕರ್ಯದ ಕುರಿತು ಸಚಿವರು ಸಂತಸ ವ್ಯಕ್ತಪಡಿಸಿದರು. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯ ಸರ್ಕಾರ ಎನ್‍ಸಿಸಿ ಕೆಡೆಟ್‍ಗಳಿಗೆ ತರಬೇತಿ ನೀಡಲು ಅಗತ್ಯವಿರುವ ಭೂಮಿ, ತರಬೇತಿ, ಆಡಳಿತ ಸೌಲಭ್ಯ, ವಿಶೇಷ ಸಲಕರಣೆಗಳನ್ನು ನೀಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿಯೇ ಪ್ರಥಮವಾಗಿ ರಾಯಚೂರಿನಲ್ಲಿ ಎಸ್‍ಸಿಸಿ ತರಬೇತಿ ಅಕಾಡೆಮಿ ತೆರೆಯುತ್ತಿರುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು. ಅಲ್ಲದೆ ಎನ್‍ಸಿಸಿ ಕೆಡೆಟ್‍ಗಳು ಶ್ರದ್ಧೆ ಮತ್ತು ಸಮರ್ಪಣಾ ಭಾವದಿಂದ ತರಬೇತಿ ಪಡೆಯುವಂತೆ ಸೂಚಿಸಿದರು.

ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರಿಂದ ಹೊಸದಾಗಿ ನಿರ್ಮಾಣವಾದ ಎನ್ ಸಿ ಸಿ ಕಟ್ಟಡ ಉದ್ಘಾಟನೆ- Tarun kranti 1

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮಾತನಾಡಿ ಶಿಸ್ತು ಮತ್ತು ಶ್ರದ್ಧೆ ಎನ್‍ಸಿಸಿಯ ಹಾಲ್ ಮಾರ್ಕ್. ಅದು ವಯಕ್ತಿಕವಾಗಿ, ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಿರುತ್ತದೆ ಎಂದು ಹೇಳಿದರು. ಸಚಿವರ ಎನ್‍ಸಿಸಿ ಕೆಡೆಟ್‍ಗಳ ಸಾಹಸಗಾಥೆ, ಸಾಮಾಜಿಕ ಮತ್ತು ಸಾಂಸ್ಕøತಿಕ ಕಾಯಕ್ರಮಗಳನ್ನು ನೋಡಿ ಆನಂದಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.