ಉತ್ತಮ ಸಮಾಜಕ್ಕಾಗಿ

ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ವಸ್ತುವಿನ ಖರೀದಿಯಲ್ಲಿ ಜಾಗೃತಿ ಅವಶ್ಯ ಪರಿಹಾರ ವೇದಿಕೆಯ ಅಧ್ಯಕ್ಷ ಬಿ.ವಿ. ಗುದ್ಲಿ ಹೇಳಿದರು.

The President of the World's Consumer Day Program Objective Awareness Compensation Platform BV Guddly said.

0

ಬೆಳಗಾವಿ: ಅನುಚಿತ ವ್ಯಾಪಾರ ಪದ್ಧತಿ ಇಂದು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ವಸ್ತುವಿನ ಖರೀದಿ ಹಾಗೂ ಸೇವೆಯಲ್ಲಿ ದೋಷ ಕಂಡುಬಂದಲ್ಲಿ ಪರಿಹಾರ ಪಡೆಯಲು ಗ್ರಾಹಕರಲ್ಲಿ ಹೆಚ್ಚಿನ ಜಾಗೃತಿ ಅವಶ್ಯ ಎಂದು ಬೆಳಗಾವಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಬಿ.ವಿ. ಗುದ್ಲಿ ಹೇಳಿದರು.
ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ವಸ್ತುವಿನ ಖರೀದಿಯಲ್ಲಿ ಜಾಗೃತಿ ಅವಶ್ಯ ಪರಿಹಾರ ವೇದಿಕೆಯ ಅಧ್ಯಕ್ಷ ಬಿ.ವಿ. ಗುದ್ಲಿ ಹೇಳಿದರು.- Tarun kranti ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ವಸ್ತುವಿನ ಖರೀದಿಯಲ್ಲಿ ಜಾಗೃತಿ ಅವಶ್ಯ ಪರಿಹಾರ ವೇದಿಕೆಯ ಅಧ್ಯಕ್ಷ ಬಿ.ವಿ. ಗುದ್ಲಿ ಹೇಳಿದರು.- Tarun kranti 1ಜಿಲ್ಲಾಡಳಿತ, ಜಿಲ್ಲಾ ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಗರದ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ಗ್ರಾಹಕರ ಸಮಸ್ಯೆಗಳು ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ನೋಂದಣಿಯಾಗುತ್ತಿವೆ. ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿದಾಗ ಮಾತ್ರ ಗ್ರಾಹಕರ ಮೇಲಿನ ಶೋಷಣೆಯನ್ನು ತಪ್ಪಿಸಬಹುದು ಎಂದರು.
ಆರ್.ಎಲ್. ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ವಿ.ಎನ್. ಜೋಶಿ ಮಾತನಾಡಿ, ಹುಟ್ಟಿನಿಂದ ಸಾವಿನವರೆಗೂ ಪ್ರತಿಯೊಬ್ಬರು ಗ್ರಾಹಕರೇ ಆಗಿದ್ದಾರೆ. ಇತ್ತೀಚಿನ ಅಧುನಿಕ ಯುಗದಲ್ಲಿ ಗ್ರಾಹಕರ ಮೇಲೆ ಹಲವಾರು ಮೋಸ, ವಂಚನೆಗಳು ನಡೆಯುತ್ತಲಿವೆ. ಆ ಮೋಸ, ವಂಚನೆಗಳನ್ನು ತಡೆಗಟ್ಟಲು ಸರಕಾರ ಸ್ವಯಂ ಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಅವುಗಳೊಂದಿಗೆ ಸಾರ್ವಜನಿಕರು ಕೂಡಾ ಕೈಜೋಡಿಸಬೇಕು ಎಂದು ಹೇಳಿದರು.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸೈಯ್ಯದಾ ಆಫ್ರೀನ್‍ಭಾನು ಬಳ್ಳಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರಾದ ಪುರುಷೋತ್ತಮ ಅವರು ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯರಾದ ಜಯಶ್ರೀ ಕಾಜಗಾರ, ಸುನೀತಾ ಬಾಗೇವಾಡಿ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎಸ್.ಎಸ್. ಉಪ್ಪಾರ, ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ. ವೈಜಯಂತಿ ಚೌಗಲಾ, ನ್ಯಾಯವಾದಿ ಎನ್.ಆರ್. ಲಾತೂರ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರಿ ಪ್ರಾಚಾರ್ಯರಾದ ಕಿರಣ ಚೌಗಲಾ ಸ್ವಾಗತಿಸಿದರು. ಕವಿತಾ ಅಕ್ಕಿ ನಿರೂಪಿಸಿದರು.The President of the World’s Consumer Day Program Objective Awareness Compensation Platform BV Guddly said.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: