ಉತ್ತಮ ಸಮಾಜಕ್ಕಾಗಿ

ಜಾಣ-ಜಾಣೆಯರ ಅಭಿನಂದನಾ ಸಮಾರಂಭ ಜೂ.21 ರಂದು

The wisest-wave congratulatory ceremony will be held on 21st June

0

ಬೆಳಗಾವಿ: (news belgaum)ಆರ್ಥಿಕ ಅನಾನುಕೂಲತೆ ನಡುವೆಯೂ ಸರಕಾರಿ ವಸತಿ ಶಾಲೆಗಳಲ್ಲಿ ಇದ್ದುಕೊಂಡು ಅತ್ಯುತ್ತಮ ಶೈಕ್ಷಣಿಕ ಸಾಧನೆಗೈದ ಜಿಲ್ಲೆಯ ಜಾಣ-ಜಾಣೆಯರ ಅಭಿನಂದನಾ ಸಮಾರಂಭವನ್ನು ಗುರುವಾರ(ಜೂ.21) ಬೆಳಿಗ್ಗೆ 10 ಗಂಟೆಗೆ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಸರಕಾರಿ ವಸತಿ ಶಾಲೆಗಳಲ್ಲಿ ಇದ್ದುಕೊಂಡು ಇತರರಿಗೆ ಮಾದರಿಯಾಗುವಂತೆ ಸಾಧನೆಗೈದಿರುವ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ದಾನಿಗಳ ನೆರವಿನೊಂದಿಗೆ ಇಂತಹ ಅಭಿನಂದನಾ ಸಮಾರಂಭವನ್ನು ನಡೆಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.91 ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ವಿದ್ಯಾಥಿ/ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಗುವುದು.

574 ಮಕ್ಕಳಿಗೆ ಪ್ರೋತ್ಸಾಹಧನ:
News Belgaum-‘ಯೋಗದ ನಡಿಗೆ-ಆರೋಗ್ಯದೆಡೆಗೆ’- ಬೃಹತ್ ಜಾಥಾ ಯೋಗವು ಭಾರತದ ಭವ್ಯ ಪರಂಪರೆ- ಸಂಸದ ಅಂಗಡಿಬೆಳಗಾವಿ ಜಿಲ್ಲೆಯಲ್ಲಿರುವ ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿ ನಿಲಯಗಳ ಮತ್ತು ಸರ್ಕಾರಿ ವಸತಿ ಶಾಲೆಗಳ ಒಟ್ಟು 551 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕಗಳನ್ನು ಪಡೆದ 6 ಜನರ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 574 ಜನರಿಗೆ ಸನ್ಮಾನಿಸಿ, ತಲಾ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹಧನ ಚೆಕ್ ವಿತರಿಸಲಾಗುವುದು.
ಇದರಲ್ಲಿ ಬೆಳಗಾವಿ ಶೈಕ್ಷಣಿಕ ವಿಭಾಗದ 9 ಮತ್ತು ಚಿಕ್ಕೋಡಿ ವಿಭಾಗದ 8 ಪಿಯುಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದ್ದಾರೆ.
ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಸಂಸದರು ಮತ್ತಿತರ ಜನಪ್ರತಿನಿಧಿಗಳನ್ನು ಅಭಿನಂದನಾ ಸಮಾರಂಭಕ್ಕೆ ಆಹ್ವಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುವ ಜಿಲ್ಲೆಯ ಕಿರಣ್ ನಿಪ್ಪಾಣಿಕರ ಅವರನ್ನು ಕೂಡ ಸನ್ಮಾನಿಸಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಅವರು ವಿವರಿಸಿದರು.

ದಾನಿಗಳ ಮೂಲಕ ನೆರವು:
ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡಲು ಅನೇಕ ದಾನಿಗಳು, ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳು ನೆರವು ನೀಡಿದ್ದು, ಅವರ ಮೂಲಕವೇ ವಿದ್ಯಾರ್ಥಿಗಳ ಹೆಸರಿಗೆ ನೇರವಾಗಿ ಚೆಕ್ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ತಿಳಿಸಿದರು.
ಈ ಸನ್ಮಾನ ಸಮಾರಂಭಕ್ಕೆ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಅವರ ಕೇಂದ್ರ ಸ್ಥಾನದಿಂದ ಸುವರ್ಣ ಸೌಧದ ಸೆಂಟ್ರಲ್ ಹಾಲ್‍ಗೆ ಕರೆತರುವ ಹಾಗೂ ಮುಕ್ತಾಯದ ನಂತರ ಪುನಃ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಯ ಉಪನಿರ್ದೇಶಕರುಗಳು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ ವಹಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್., ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಎಚ್.ಬಿ. ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. The wisest-wave congratulatory ceremony will be held on 21st June   

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.