ಉತ್ತಮ ಸಮಾಜಕ್ಕಾಗಿ

ಸಮರ್ಥ ಅಭ್ಯರ್ಥಿಗಳಿಗೆ ಮಾತ್ರ ಕಾಂಗ್ರೆಸ್ ಟಿಕೇಟ್: ರಮೇಶ ಜಾರಕಿಹೊಳಿ

Tickets to Congress only for potential candidates: Ramesh Jarakiholi

0

ಬೆಳಗಾವಿ: (news belagavi)2018ರ ವಿಧಾನಸಭೆ ಚುನಾವಣೆಗೆ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲಿ ಗೆಲ್ಲುವ ಕುದುರೆಗಳಿಗೆ ಮಾತ್ರ ಪಕ್ಷದ ಟಿಕೆಟ್ ಕೊಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಜಿಲ್ಲೆಯ ಪ್ರಮುಖ ನಾಯಕರು ಹಾಗೂ ಶಾಸಕರ ಸಭೆಯುದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯ ಕಾಂಗ್ರೆಸ್ ಮುಖಂಡರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಸಂಪೂರ್ಣ ಶಮನ ಮಾಡಲಾಗಿದೆ. ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಕನಿಷ್ಠ 14 ಸೀಟ್ ಗೆಲ್ಲಬಹುದು ಎಂದು ಸಭೆಯಲ್ಲಿ ನಾಯಕರಿಗೆ ಮನವಿ ಮಾಡಿದರು.ಅರ್ಹತೆ ಉಳ್ಳ ಮತ್ತು ಜನಮನ ಗೆದ್ದು ಆಯ್ಕೆಯಾಗಿ ಬರುವ ಅಭ್ಯರ್ಥಿಗಳನ್ನು ಮಾತ್ರ ಕಣದಲ್ಲಿ ಇಳಿಸಲಾಗುವುದು ಎಂದರು.
ಆಯಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಡಲು ನಾನು, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಮಾಜಿ MLC ವೀರಕುಮಾರ ಪಾಟೀಲ ಅವರನ್ನು ಹೈಕಮಾಂಡ್ ನೇಮಿಸಿದೆ ಎಂದು ಈ ಸಂದರ್ಭ ತಮಗೆ ಎದುರಾದ ಮಾಧ್ಯಮದವರಿಗೆ ತಿಳಿಸಿದರು. ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಫೀರೊಜ್ ಸೇಠ್, ಪ್ರಕಾಶ ಹುಕ್ಕೇರಿ, ಮಹಾಂತೇಷ ಕೌಜಲಗಿ, ಗಣೇಶ ಹುಕ್ಕೇರಿ, ವಿವೇಕರಾವ ಪಾಟೀಲ, ವೀರಕುಮಾರ ಪಾಟೀಲ, ಜಿಲ್ಲಾದ್ಯಕ್ಷ ವಿನಯ ನಾವಲಗಟ್ಟಿ, ಅಶೋಕ ಪಟ್ಟಣ, ನಗರಾದ್ಯಕ್ಷ ರಾಜು ಸೇಠ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದರು.  Tickets to Congress only for potential candidates: Ramesh Jarakiholi

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: