ಉತ್ತಮ ಸಮಾಜಕ್ಕಾಗಿ

ಎರಡು ಪಕ್ಷಗಳ ನಡುವೆ ಒಡಂಬಡಿಕೆಯಾಗಿದೆ, ಸರ್ಕಾರ ಬೀಳಲ್ಲ ಸುಭದ್ರವಾಗಿರುತ್ತೆ: H.D.ದೇವೇಗೌಡ

the two parties accepted the agreement so that government will be secure : H.D.Devegouda

0

ನವದೆಹಲಿ: (news belagavi) ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಜೊತೆಯಲ್ಲೇ‌ ಇರುತ್ತೇವೆ. ರಾಜ್ಯದಲ್ಲಿ ಕೆಲವು‌ ಗೊಂದಲಗಳಿರುವುದು ನಿಜ ಅವು ಸರಿ ಆಗಲಿವೆ ಎಂದು ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ದೆಹಲಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ದೆಹಲಿಗೆ ಬಂದ ಹಿನ್ನಲೆ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲು ಎಂಬ ಸುದ್ದಿ ಹರಡುತ್ತಿದೆ. ಆದರೆ ನಾನು ದೆಹಲಿಗೆ ಬಂದಿದ್ದು ರಕ್ಷಣಾ ಇಲಾಖೆ ಸಭೆಗೆ. ಕಳೆದ ಮೂರು ಸಭೆಗೆ ಬಂದಿರಲಿಲ್ಲವಾದುದರಿಂದ ಈ‌ ಸಭೆಗೆ ಬಂದಿದ್ದೆ. ಆದರೆ ಬೇರೆ ಕಾರಣದಿಂದ‌ ಇವತ್ತಿನ ಸಭೆ ರದ್ದಾಗಿದೆ. ಗೊಂದಲ‌ ಆಗಬಾರದೆಂಬ ಕಾರಣಕ್ಕಾಗಿ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಎರಡು ಪಕ್ಷಗಳ ನಡುವೆ ಒಡಂಬಡಿಕೆಯಾಗಿದೆ, ಸರ್ಕಾರ ಬೀಳಲ್ಲ ಸುಭದ್ರವಾಗಿರುತ್ತೆ: H.D.ದೇವೇಗೌಡ- Tarun kranti
ನಂತರ ಮಾತನಾಡಿದ ಅವರು, ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ‌ ಸ್ವೀಕಾರ ಸಮಾರಂಭದಲ್ಲಿ ಹೊಸ ನಿರೀಕ್ಷೆ ಹುಟ್ಟುಕೊಂಡಿತ್ತು. ದೇಶದಲ್ಲಿ ಎನ್ ಡಿ ಎಗೆ ಪರ್ಯಾಯ ರಂಗ ರಚನೆಯ ನಿರೀಕ್ಷೆ ಹುಟ್ಟಿಕೊಂಡಿತ್ತು.

ನಿತೀಶ್ ಕುಮಾರ್‌ ಬಿಜೆಪಿಯಿಂದ ದೂರವಾಗುವ ಸಂದರ್ಭ ಸೃಷ್ಟಿಯಾಗಿದೆ. ಮಾಯಾವತಿ ಮತ್ತು ಅಖಿಲೇಶ್ ಯಾದವ್ ನಡುವೆ ಮಾತುಕತೆ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ- ಎಡಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ ಎಂದು ಹೇಳಿದರು.

ಕಾಂಗ್ರೆಸ್ ಜೊತೆಗೇನೆ ಲೋಕಸಭೆ ಚುನಾವಣೆ ನಡೆಯಲಿದ್ದು, ಲೋಕಸಭೆ ಚುನಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ಮಾಡಬೇಕಾಗುತ್ತದೆ. ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಸ್ಥಾನಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲಿದೆ. ಕೇರಳದಲ್ಲಿ ಮೊದಲಿಂದಲೂ ಜೆಡಿಎಸ್ ಗೆ ಒಂದು ಸ್ಥಾನ ಬಿಟ್ಟುಕೊಡುತ್ತಾರೆ. ಈ ಬಗ್ಗೆ ಚಿಂತನೆಗಳು ನಡೆದಿವೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಇನ್ನೂ ಸೀಟು ಹಂಚಿಕೆ ಬಗ್ಗೆ‌ ಚರ್ಚೆಯಾಗಿಲ್ಲ. ಬಿಎಸ್ ಪಿ ನಮ್ಮ ಜೊತೆ ಇರಲಿದೆ. ಜೆಡಿಎಸ್ ಪಾಲಿನ ಸೀಟುಗಳಲ್ಲಿ ಒಂದು ಸ್ಥಾನ ಬಿಎಸ್ ಪಿಗೆ ನೀಡಲಾಗುವುದು ಎಂದು ಹೆಚ್.ಡಿ ದೇವೇಗೌಡ ಹೇಳಿದರು.

ಅವಧಿಗೆ ಮುನ್ನವೇ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಚುನಾವಣೆ ಘೋಷಸುವ ಸಾಧ್ಯತೆ ಇದೆ. ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ಮೋದಿ ಮತ್ತು ಅಮಿತ್ ಶಾ ಕಾರ್ಯವೈಖರಿ ಹಾಗಿದೆ. ಈಗಾಗಲೇ ಕೆಲ ರಾಜ್ಯಗಳಿಗೆ ಚುನಾವಣೆಗೆ ಸಿದ್ದರಾಗುವಂತೆ ಸೂಚನೆ ನೀಡಿದ್ದಾರೆ ಎಂದು ವಿವರಿಸಿದರು.

ಎರಡು ಪಕ್ಷಗಳ ನಡುವೆ ಒಡಂಬಡಿಕೆಯಾಗಿದೆ, ಸರ್ಕಾರ ಬೀಳಲ್ಲ ಸುಭದ್ರವಾಗಿರುತ್ತೆ: H.D.ದೇವೇಗೌಡ- Tarun kranti 1
ಶಾಸಕ ನಾರಾಯಣ್ ರಾವ್ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ನಾರಾಯಣ್ ರಾವ್ ನನ್ನ ಸ್ನೇಹಿತ ಮಾಧ್ಯಮದವರು ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಬೀಳಲ್ಲ ಸುಭದ್ರವಾಗಿರುತ್ತೆ ಎಂದು ಹೇಳಿದರು.

ಸಿದ್ದರಾಮಯ್ಯ ಮಾತುಗಳಿಗೆ ಪ್ರತಿಕ್ರಿಯೆ ಕೊಡಲ್ಲ ಎಂದು ದೇವೇಗೌಡ ಅವರು, ಮಾತುಕತೆ ಆಗಿರುವುದು ಕಾಂಗ್ರೆಸ್-ಜೆಡಿಎಸ್ ನಡುವೆ ಎರಡು ಪಕ್ಷಗಳ ನಡುವೆ ಆಗಿರುವ ಒಡಂಬಡಿಕೆ ಪ್ರಕಾರ ಸರ್ಕಾರ ನಡೆಯಲಿದೆ. ಈ ಬಗ್ಗೆ ರಾಹುಲ್ ಗಾಂಧಿ-ಕುಮಾರಸ್ವಾಮಿ ಚರ್ಚೆ ಮಾಡುತ್ತಾರೆ ಎಂದು ತಿಳಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.