ಉತ್ತಮ ಸಮಾಜಕ್ಕಾಗಿ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಚುನಾವಣಾಧಿಕಾರಿಗಳಿಗೆ ತರಬೇತಿ

Urban Local Body Elections: Training for Election Officers

0

ಚುನಾವಣೆಯಲ್ಲಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ
News Belgaum-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಚುನಾವಣಾಧಿಕಾರಿಗಳಿಗೆ ತರಬೇತಿಬೆಳಗಾವಿ:(news belgaum) ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ಹಾಗೂ ನ್ಯಾಯಯುತವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಎಚ್ಚರಿಕೆ ನೀಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ (ಆ.8) ನಡೆದ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳು, ವೆಚ್ಚ ನಿರ್ವಹಣಾ ತಂಡ, ನೋಡಲ್/ಸೆಕ್ಟ್‍ರ್ ಅಧಿಕಾರಿಗಳಿಗೆ ಹಾಗೂ ಇವಿಎಂ ಮಾಸ್ಟರ್ ಟ್ರೈನರ್‍ಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿದ್ದು, ಇದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ನಡೆಯಲಿರುವುದರಿಂದ ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.
ನಾಮಪತ್ರ ಸ್ವೀಕಾರ, ಪರಿಶೀಲನೆ, ತಿರಸ್ಕಾರ, ಬ್ಯಾಲೆಟ್ ಪೇಪರ್ ಮುದ್ರಣ, ಚಿಹ್ನೆ ಹಂಚಿಕೆ ಇತ್ಯಾದಿ ವಿಷಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಬಳಿಕ ನಿಯಮಾವಳಿ ಪ್ರಕಾರ ಕಾರ್ಯನಿರ್ವಹಿಸಬೇಕು. ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೇ ನಿಯಮಬದ್ಧವಾಗಿ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯು ಸಹ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಷ್ಟೆ ಪ್ರಾಮುಖ್ಯತೆಯನ್ನು ಹೊಂದಿದೆ. ಪ್ರತಿಯೊಂದು ಚುನಾವಣೆಯು ವಿಭಿನ್ನ ಹಾಗೂ ಹೊಸ ಸವಾಲುಗನ್ನು ಒಳಗೊಂಡಿರುತ್ತದೆ. ನಿಯಮಗಳು ಪ್ರತಿ ಸಲ ಬದಲಾಗುತ್ತಿರುತ್ತವೆ. ಆದ್ದರಿಂದ ಅಧಿಕಾರಿಗಳು ಚುನಾವಣೆಗೆ ಸಂಬಂಧಪಟ್ಟ ಎಲ್ಲ ಮಾಹಿತಿಯನ್ನು ಓದಿ, ಕೇಳಿ ಅರ್ಥೈಸಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಮಸ್ಯೆ, ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು, ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಥವಾ ಚುನಾವಣಾ ಆಯೋಗದ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆಯಬೇಕು ಎಂದರು.

ಸಂಪೂರ್ಣ ಮಾಹಿತಿ ಪಡೆಯಿರಿ:
ರಾಜ್ಯಮಟ್ಟದ ಮಾಸ್ಟರ್ ಟ್ರೈನರ್ ಎನ್.ವಿ. ಶಿರಗಾಂವಕರ್ ಅವರು ತರಬೇತಿ ನೀಡಿ, ಪ್ರಥಮ ಬಾರಿಗೆ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಚುನಾವಣೆಯ ಸಮಗ್ರ ಮಾಹಿತಿಯನ್ನು ಮೊದಲು ತಿಳಿದುಕೊಳ್ಳಬೇಕೆಂದು ಹೇಳಿದರು.
ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ಕಚೇರಿಯಲ್ಲಿ ಅಗತ್ಯವಾದ ಎಲ್ಲ ವ್ಯವಸ್ಥೆಯನ್ನು ಮುಂಚಿತವಾಗೆ ಮಾಡಬೇಕು. ತಹಶೀಲ್ದಾರರು ಅಥವಾ ಸಂಬಂಧಪಟ್ಟ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ, ಮತಗಟ್ಟೆಯಲ್ಲಿ ಎಲ್ಲ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಚುನಾವಣಾಧಿಕಾರಿಗಳ ಕರ್ತವ್ಯ, ನಾಮಪತ್ರ ಸ್ವೀಕಾರ, ಚುನಾವಣೆಯ ನಿಯಮಗಳು ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ವಿವಿಧ ವಿಷಯಗಳ ಬಗ್ಗೆ ಶಿರಗಾಂವಕರ್ ಅವರು ತರಬೇತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ, ರಾಜ್ಯಮಟ್ಟದ ಮಾಸ್ಟರ್ ಟ್ರೈನರ್‍ಗಳು, ಚುನಾವಣಾಧಿಕಾರಿಗಳು ಸೇರಿದಂತೆ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.