ಉತ್ತಮ ಸಮಾಜಕ್ಕಾಗಿ

ನಗರ ಸ್ಥಳೀಯ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆ

news belagavi

0

ಬೆಳಗಾವಿ: (news belgaum)ಚಿಕ್ಕೋಡಿ, ರಾಯಬಾಗ, ಹುಕ್ಕೇರಿ, ಗೋಕಾಕ, ಖಾನಾಪೂರ, ಬೈಲಹೊಂಗಲ, ಸವದತ್ತಿ, ರಾಮದುರ್ಗ ತಾಲೂಕಿನ ನಗರ ಸ್ಥಳೀಯ ಸಂಸ್ಥೆಗಳಿಗೆ (ನಗರಸಭೆ ಮತ್ತು ಪುರಸಭೆ) ಆಗಸ್ಟ್ 31 ರಂದು (ಶುಕ್ರವಾರ) ಚುನಾವಣೆ ನಡೆಯಲಿದ್ದು, ಎಲ್ಲ ಕಾರ್ಮಿಕರಿಗೂ ಮತದಾನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಖಾನೆಗಳ ಆಡಳಿತ ವರ್ಗದವರು ಈ ಎಲ್ಲ ಕ್ಷೇತ್ರಗಳ ಅರ್ಹ ಮತದಾರ ಕಾರ್ಮಿಕರಿಗೆ ಮತ ಚಲಾಯಿಸಲು ಆಗಸ್ಟ್ 31 ರಂದು ತಪ್ಪದೇ ವೇತನ ಸಹಿತ ರಜೆ ಮಂಜೂರು ಮಾಡಬೇಕೆಂದು ಬೆಳಗಾವಿ ವಿಭಾಗ-1 ರ ಕಾರ್ಖಾನೆಗಳ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಕಾರ್ಖಾನೆಯು ನಿರಂತರ ಉತ್ಪಾದನೆಯಲ್ಲಿ ತೊಡಗುವುದು ಅನಿವಾರ್ಯವೆಂದು ಕಂಡುಬಂದರೆ ಪರ್ಯಾಯ ವ್ಯವಸ್ಥೆ ರೂಪಿಸಿಕೊಂಡು ಅಂತಹ ಉತ್ಪಾದನೆಗೆ ಸಂಬಂಧಪಟ್ಟ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಾಕಷ್ಟು ಕಾಲಾವಕಾಶ ಮಾಡಿಕೊಡಬೇಕೆಂದು ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.