ಉತ್ತಮ ಸಮಾಜಕ್ಕಾಗಿ

ಪಕ್ಷ, ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

Violation of Code of Conduct: Notice to file case against party, candidate

0

ಬೆಳಗಾವಿ: (news belgaum)ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಜಾರಿಗೊಂಡಾಗ ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳು ನಿಯಮಾವಳಿ ಉಲ್ಲಂಘಿಸಿದಾಗ ಮುಲಾಜಿಲ್ಲದೇ ನಿಯಮಾವಳಿ ಪ್ರಕಾರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಎಸ್. ಜಿಯಾವುಲ್ಲಾ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಟಿಯು ಸಭಾಂಗಣದಲ್ಲಿ ಶುಕ್ರವಾರ (ಮಾ.23) ಏರ್ಪಡಿಸಲಾಗಿದ್ದ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾದ ವಿವಿಧ ತಂಡಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
News Belgaum-ನೀತಿ ಸಂಹಿತೆ ಉಲ್ಲಂಘನೆ : ಪಕ್ಷ, ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವುದು ನಮ್ಮ ಗುರಿಯಾಗಿರಬೇಕು. ಎಲ್ಲ ಅಧಿಕಾರಿಗಳು ಜಾತಿ-ಧರ್ಮಗಳನ್ನು ಮೀರಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು.
ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂಬ ಆಶಯದಿಂದ ಇತ್ತೀಚೆಗೆ ಹಲವಾರು ನಿಯಮಾಳಿಗಳನ್ನು ಜಾರಿಗೆ ತರಲಾಗಿರುತ್ತದೆ. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ತಮ್ಮ ಪ್ರತಿಸ್ಪರ್ಧಿಗಳ ಮೇಲೆ ನಿಗಾ ಇಟ್ಟಿರುವುದರಿಂದ ದೂರುಗಳ ಸಂಖ್ಯೆ ಹೆಚ್ಚಾಗಿರುತ್ತದೆ. ಆದ್ದರಿಂದ ಚುನಾವಣಾ ವೀಕ್ಷಕ ತಂಡಗಳು ಜಾಗರೂಕತೆಯಿಂದ ಕಾರ್ಯನಿವೃಹಿಸಬೇಕು. ಯಾವುದೇ ಗೊಂದಲಗಳಿಗೆ ಅಥವಾ ತಾರತಮ್ಯಕ್ಕೆ ಅವಕಾಶ ನೀಡಬಾರದು. ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು ಎಂದು ಜಿಯಾವುಲ್ಲಾ ಅವರು ಹೇಳಿದರು.
ಚುನಾವಣೆ ನೀತಿ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ತಂಡಗಳ ಮುಖ್ಯಸ್ಥರು ಹಾಗೂ ಸದಸ್ಯರು ತಮ್ಮ ಕರ್ತವ್ಯ ಹಾಗೂ ನಿಯಮಾವಳಿಗಳನ್ನು ಸರಿಯಾಗಿ ಅರಿತುಕೊಂಡರೆ ಕೆಲಸ ಸುಲಭವಾಗುತ್ತದೆ ಎಂದು ತಿಳಿಸಿದರು.

ಚುನಾವಣೆ ಕೆಲಸ ಕಡ್ಡಾಯ :
ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಚುನಾವಣಾ ಕರ್ತವ್ಯ ಕಡ್ಡಾಯವಾಗಿದ್ದು, ಯಾರಿಗೂ ಇದರಿಂದ ವಿನಾಯಿತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಸ್ಪಷ್ಟಪಡಿಸಿದರು.
ಚುನಾವಣಾ ಕೆಲಸದಿಂದ ವಿನಾಯತಿ ಪಡೆಯಲು ವ್ಯರ್ಥ ಪ್ರಯತ್ನ ಮಾಡದೇ ತಮಗೆ ವಹಿಸಿರುವ ಕೆಲಸವನ್ನು ಸಮಪರ್ಕವಾಗಿ ನಿಭಾಯಿಸುವ ಮೂಲ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲು ಮುಂದಾಗಬೇಕೆಂದು ಕೆರೆ ನೀಡಿದರು.
ಚುನಾವಣೆ ವಿಶೇಷ ಸಂದರ್ಭವಾಗಿರುವುದರಿಂದ ಇದನ್ನು ಸಕರಾತ್ಮಕ ಮನೋಭಾವದಿಂದ ಸ್ವೀಕರಿಸಿ ದಿನಕ್ಕೆ ಕನಿಷ್ಠ 14 ಗಂಟೆ ಕೆಲಸ ಮಾಡಿದರೆ ಎಲ್ಲ ಕೆಲಸವು ಸುಲಭವಾಗುತ್ತದೆ ಎಂದು ಹೇಳಿದರು.
ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿದ್ದು, ಮಾದರಿ ನೀತಿ ಸಂಹಿತೆ ಜಾರಿಗೆ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಬೇಕೆಂದು ತಿಳಿಸಿದರು. ಮಾದರಿ ನೀತಿ ಸಂಹಿತಿ ನೋಡಲ್ ಅಧಿಕಾರಿ ರಮೇಶ ಕಳಸದ, ಭೂ ದಾಖಲೆ ಹಾಗೂ ಭೂ ಮಾಪನಾ ಇಲಾಖೆ ಜಂಟಿ ನಿರ್ದೇಶಕ ಜಗದೀಶ ರೂಗಿ, ಅಬಕಾರಿ ಇಲಾಖೆಯ ಆಯುಕ್ತ ಅರುಣ ಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಡಾ|| ಪ್ರವೀಣ ಬಾಗೇವಾಡಿ, ರಾಜ್ಯ ಮಟ್ಟದ ಟ್ರೇನರ್ ಎನ್.ವಿ. ಶಿರಗಾಂವಕರ, ಆದಾಯ ತೆರಿಗೆ ಇಲಾಖೆ ಅಧಿಕಾರಿ ಶಕೀಲ್ ಅಹ್ಮದ ಮತ್ತಿತರರು ಉಪಸ್ಥಿತರಿದ್ದರು.
ಇಡೀ ದಿನ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಕುರಿತು ಮಾಹಿತಿ ನೀಡಲಾಯಿತು.
ಮಾದರಿ ನೀತಿ ಸಂಹಿತಿ ಮತ್ತು ಇತರ ವಿಷಯಗಳ ಬಗ್ಗೆ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಹಾಗೂ ಎಂ.ಸಿ.ಸಿ. ನೋಡಲ್ ಅಧಿಕಾರಿ ರಮೇಶ ಕಳಸದ ವಿವರಿಸಿದರು.
ಚುನಾವಣಾ ಪ್ರಕ್ರಿಯೆ, ಅಂಚೆ ಮತ ಪತ್ರಗಳು, ಇವಿಎಂ, ವಿವಿ ಪ್ಯಾಟ್, ಬಗ್ಗೆ ಚುನಾವಣಾ ಸಿಬ್ಬಂದಿಗೆ ತರಬೇತಿ ನೀಡಲಾಯಿತು. Violation of Code of Conduct: Notice to file case against party, candidate

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Violation of Code of Conduct: Notice to file case against party, candidate

Leave A Reply

 Click this button or press Ctrl+G to toggle between Kannada and English

Your email address will not be published.