ಉತ್ತಮ ಸಮಾಜಕ್ಕಾಗಿ

ವಿಶ್ವಕರ್ಮ ಜಯಂತಿ: ಪೂರ್ವಭಾವಿ ಸಭೆ

news belagavi

0

ಸೆ.17 ರಂದು ಸರಳ ಆಚರಣೆಗೆ ನಿರ್ಧಾರ
ಬೆಳಗಾವಿ:(news belgaum) ಕೊಡಗು ಪ್ರವಾಹ ಸಂತ್ರಸ್ಥರಿಗೆ ನೆರವು ನೀಡುವ ಉದ್ದೇಶದಿಂದ ಈ ಬಾರಿಯ ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಸೆ.11) ಅಪರ ಜಿಲ್ಲಾಧಿಕಾರಿ ಡಾ. ಎಚ್.ಬಿ. ಬೂದೆಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಈ ಕುರಿತು ತೀರ್ಮಾನಿಸಿದರು.
ಜಯಂತಿಯ ಅಂಗವಾಗಿ ಜರುಗಬೇಕಿದ್ದ ಮೆರವಣಿಗೆಯನ್ನು ರದ್ದುಗೊಳಿಸಿ, ಕೇವಲ ವೇದಿಕೆ ಕಾರ್ಯಕ್ರಮವನ್ನು ಮಾತ್ರ ಆಯೋಜಿಸುವಂತೆ ಸಮಾಜದ ಮುಖಂಡರು ಅಧಿಕಾರಿಗಳಿಗೆ ತಿಳಿಸಿದರು. ಅಧಿಕಾರಿಗಳು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದರು.
ವಿಶ್ವಕರ್ಮ ಜಯಂತಿ: ಪೂರ್ವಭಾವಿ ಸಭೆ- Tarun krantiಅಪರ ಜಿಲ್ಲಾಧಿಕಾರಿ ಡಾ. ಎಚ್.ಬಿ ಬೂದೆಪ್ಪ ಅವರು ಮಾತನಾಡಿ, ಸೆ.17 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಉಪನ್ಯಾಸ ನೀಡಲು ಉಪನ್ಯಾಸಕರನ್ನು ಆಹ್ವಾನಿಸಬೇಕೆಂದು ಸೂಚಿಸಿದರು.
ವೇದಿಕೆಯನ್ನು ಅಲಂಕರಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಯಂತಿಯ ಸಂದರ್ಭದಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಜಯಂತಿಯ ಕುರಿತು ಪ್ಲೆಕ್ಸ್‍ಗಳನ್ನು ಅಳವಡಿಸುವ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕೆಂದು ಸಮಾಜದ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇದೇ ರೀತಿ ಎಲ್ಲ ತಾಲೂಕು ಕೇಂದ್ರಗಳಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜಯಂತಿಯನ್ನು ಆಚರಿಸಬೇಕೆಂದು ನಿರ್ದೇಶನ ನೀಡಿದರು.

ಸಮಾಜದ ವತಿಯಿಂದಲೂ ದೇಣಿಗೆ:
ಕೊಡುಗು ಪ್ರವಾಹ ಸಂತ್ರಸ್ಥರಿಗೆ ನೆರವಾಗುವ ನಿಟ್ಟಿನಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ದೇಣಿಗೆಯನ್ನು ಸಂಗ್ರಹಿಸಿ, ಜಯಂತಿಯ ದಿನದಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಸಮಾಜದ ಮುಖಂಡರು ಸಭೆಯಲ್ಲಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಶೈಲ ಕರಿಶಂಕರಿ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ಎಸಿಪಿ ಶಂಕರ ಮಾರೀಹಾಳ, ಮಹಾನಗರ ಪಾಲಿಕೆ ಸದಸ್ಯ ಅಜ್ಜಪ್ಪ ಬಡಿಗೇರ, ಸಮಾಜದ ಮುಖಂಡರಾದ ಸಿ.ವೈ. ಪತ್ತಾರ, ಬಸಪ್ಪ ಬಡಿಗೇರ, ಕಲ್ಲಪ್ಪ ಬಡಿಗೇರ, ಪ್ರಭಾವತಿ ಪತ್ತಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.