ಉತ್ತಮ ಸಮಾಜಕ್ಕಾಗಿ

ಮೇ 15 ರಂದು ಬೆಳಿಗ್ಗೆ 6 ಗಂಟೆಯಿಂದ ಮತ ಎಣಿಕೆ ನಡೆಯಲಿರುವುದರಿಂದ : ನಿಷೇಧಾಜ್ಞೆ ಜಾರಿ ಪ್ರಕಟಣೆ

The vote count will be held on May 15 at 6 am: Prohibition of notification

0

ಮತ ಎಣಿಕೆ : ನಿಷೇಧಾಜ್ಞೆ ಜಾರಿ
ಬೆಳಗಾವಿ:(news belagavi) ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನೆಲ್ಲೆಯಲ್ಲಿ ಮೇ 15 ರಂದು ಮತ ಎಣಿಕೆ ನಡೆಯಲಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 15 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ16ರ ಬೆಳಿಗ್ಗೆ 6 ಗಂಟೆಯವರೆಗೆ ಬೆಳಗಾವಿ ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಬೆಳಗಾವಿ ನಗರದ ಪೊಲೀಸ್ ಆಯುಕ್ತರಾದ ಎಂ. ಚಂದ್ರಶೇಖರ ಅವರು ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ.

ಕುಂತರೂ ಕೂಡಂಗಿಲ್ಲ…ನಿಂತರೂ ನಿಲ್ಲಂಗಿಲ್ಲ…ಇನ್ನಿಲ್ಲದ ಚಡಪಡಿಕೆ!- Tarun krantiನಿಷೇಧಾಜ್ಞೆಯ ಷರತ್ತುಗಳು ಈ ಕೆಳಗಿನಂತಿವೆ.
• ಬೆಳಗಾವಿ ನಗರ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.
• ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
• ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
• ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
• ಮನುಷ್ಯ ಶವಗಳ ಅಥವಾ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
• ಯಾವುದೇ ರೀತಿ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ, ರಾಜಕೀಯ ಸಭೆ, ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.
• ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

• ಯಾವುದೇ ವ್ಯಕ್ತಿ ಸಾರ್ವಜನಿಕವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂದಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
• ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ದಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಎಂ. ಚಂದ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 23 ರಂದು ಸಾರ್ವಜನಿಕ ಅಹವಾಲು ಕಾರ್ಯಕ್ರಮ
ಬೆಳಗಾವಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಧಾರವಾಡ ಇವರ ಸಹಯೋಗದೊಂದಿಗೆ ಮೇ 23 ರಂದು ವಿಕಲಚೇತನ ಮಕ್ಕಳ ಸಮಸ್ಯೆಗಳ ನಿವಾರಣೆಗಾಗಿ “ಸಾರ್ವಜನಿಕ ಅಹವಾಲು” ಕಾರ್ಯಕ್ರಮವನ್ನು ಧಾರವಾಡದಲ್ಲಿ ಆಯೋಜಿಸಿಲಾಗಿದೆ.
ಸದರಿ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು ಸಮಸ್ಯಾತ್ಮಕ ವಿಕಲಚೇತನ ಮಕ್ಕಳು, ಪಾಲಕರು ಅಥವಾ ಪೋಷಕರೊಂದಿಗೆ ಹಾಜರಾಗಬಹುದಾಗಿದೆ.
ಕಾರ್ಯಕ್ರಮಕ್ಕೆ ಹಾಜರಾದವರಿಗೆ ಪ್ರಯಾಣದ ಟಿಕೆಟ್ ದರದನ್ವಯ ಪ್ರಯಾಣ ಭತ್ಯೆಯನ್ನು ಪಾವತಿಸಲಾಗುವುದು. ಆದ್ದರಿಂದ ಬೆಳಗಾವಿ ಜಿಲ್ಲೆಯಿಂದ ಕನಿಷ್ಠ 50 ವಿಕಲಚೇತನರು, ಪ್ರತಿನಿಧಿಗಳು ಭಾಗವಹಿಸಬಹುದು.
ಭಾಗವಹಿಸಲಿಚ್ಛಿಸುವವರು ತಮ್ಮ ಹೆಸರನ್ನು ಮೇ 18ರ ಒಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿಗಳು ಬೆಳಗಾವಿ ಇವರಲ್ಲಿ ಹೆಸರು ನೋಂದಾಯಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8050609098 ಮತ್ತು ಕಚೇರಿ ಸಂ: 0831-2476097 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಿವುಡು ಮಕ್ಕಳ ಸರ್ಕಾರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಳಗಾವಿ: ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ, ಕಿವುಡು ಮಕ್ಕಳ ಸರ್ಕಾರಿ ಶಾಲೆ ಆಜಮ್ ನಗರ 1 ನೇ ಕ್ರಾಸ್, ವಿದ್ಯಾಗಿರಿ ಬೆಳಗಾವಿ ಇಲ್ಲಿ 2018-19 ನೇ ಶೈಕ್ಷಣಿಕ ವರ್ಷಕ್ಕೆ ಪೂರ್ವ ಪ್ರಾಥಮಿಕ ತರಗತಿಯಿಂದ 10 ನೇ ತರಗತಿಯ ವರೆಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಿವುಡು ಮತ್ತು ಮೂಗು ಬಾಲಕಿಯರಿಗೆ (ಹೆಣ್ಣು ಮಕ್ಕಳು) ಗೆ ಮಾತ್ರ ಪ್ರವೇಶ. ಸೂಕ್ತ ಪ್ರಾಧಿಕಾರ, ಮಂಡಳಿಯಿಂದ ಪಡೆದ ವೆದ್ಯಕೀಯ ಪ್ರಮಾಣ ಪತ್ರ. ಜನ್ಮ ದಿನಾಂಕ ಧೃಢೀಕರಣ ಪತ್ರ ಅಥವಾ ಬೇರೆ ಶಾಲೆಯಲ್ಲಿ ಓದುತ್ತಿದ್ದರೆ, ಶಾಲಾ ವರ್ಗಾವಣೆ ಪ್ರಮಾಣ ಪತ್ರ. ರಹವಾಸಿ, ವಾಸಸ್ಥಳ ಧೃಢೀಕರಣ ಪತ್ರ ಅಥವಾ ಆಧಾರ ಕಾರ್ಡ. ಜಾತಿ, ಆದಾಯ ಪ್ರಮಾಣ ಪತ್ರ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯಿಂದ ನೀಡಿರುವ ಗುರುತಿನ ಚೀಟಿ. ಇತ್ತೀಚಿನ 05 ಪಾಸ ಪೂರ್ಟ ಅಳತೆಯ ಭಾವ ಚಿತ್ರಗಳು(ಪೋಟೋ).
ಮೇ 15 ರೋಳಗೆ ಅರ್ಜಿ ಸಲ್ಲಿಬೇಕು. ಅಧೀಕ್ಷಕರವರÀ ಕಾರ್ಯಾಲಯ ಕಿವುಡು ಮಕ್ಕಳ ಸರ್ಕಾರಿ ಶಾಲೆ, ಬೆಳಗಾವಿ ಆರ್. ಬಿ. ಬನಶಂಕರಿ, ಸಹಾಯಕ ನಿರ್ದೇಶಕರು(ಡಿ.ಎ.ಎಸ್.)/ಅಧೀಕ್ಷಕರು, 9449479456/8660375604 ಆರ್.ಬಿ. ಯಮಕನಮರ್ಡಿ, ಪ್ರಥಮ ದರ್ಜೆ ಸಹಾಯಕರು, ಕಿವುಡು ಮಕ್ಕಳ ಸರ್ಕಾರಿ ಶಾಲೆ, ಬೆಳಗಾವಿ. 9449442212 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಬೇಕೆಂದು ಬೆಳಗಾವಿ ಕಿವುಡ ಮಕ್ಕಳ ಸರಕಾರಿ ಶಾಲೆ ಅಧೀಕ್ಷಕರು ಕ್ರಕಟಣೆಯಲ್ಲಿ ತಿಳಿಸಿದ್ದಾರೆ.    

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.