ಉತ್ತಮ ಸಮಾಜಕ್ಕಾಗಿ

ಆಟೋಗಳಿಗೆ ಭಿತ್ತಿ ಪತ್ರ ಅಂಟಿಸಿ ಮತದಾನ ಜಾಗೃತಿ

Voting awareness for posters for autos

0

ಬೆಳಗಾವಿ: (news belagavi)ಜಿಲ್ಲಾ ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್.ಆರ್ ಅವರು ಶುಕ್ರವಾರ (ಏ.20) ನಗರದ ಚನ್ನಮ್ಮ ಸರ್ಕಲ್ ಸಮೀಪದ ಡಾ|| ಬಿ.ಆರ್. ಅಂಬೇಡ್ಕರ್ ಆಟೋ ನಿಲ್ದಾಣದಲ್ಲಿನ ಆಟೋಗಳಿಗೆ ಮತದಾನ ಜಾಗೃತಿ ಭಿತ್ತಿ ಪತ್ರಗಳನ್ನು ಅಂಟಿಸಿ ಮತದಾನ ಕುರಿತು ಅರಿವು ಮೂಡಿಸಿದರು.
ಆಟೋಗಳಿಗೆ ಭಿತ್ತಿ ಪತ್ರ ಅಂಟಿಸಿ ಮತದಾನ ಜಾಗೃತಿ- Tarun kranti ಆಟೋಗಳಿಗೆ ಭಿತ್ತಿ ಪತ್ರ ಅಂಟಿಸಿ ಮತದಾನ ಜಾಗೃತಿ- Tarun kranti 1ಆಟೋ ನಿಲ್ದಾಣದಲ್ಲಿನದಲ್ಲಿದ್ದ ಆಟೋಗಳಿಗೆ ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆಯ ಕುರಿತ ಮಾಹಿತಿ ಇರುವ ಭಿತ್ತಿ ಪತ್ರಗಳನ್ನು ಅಂಟಿಸಿದ ರಾಮಚಂದ್ರನ್ ಅವರು, ಆಟೋ ರಿಕ್ಷಾ ಚಾಲಕರಿಗೆ ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆಯ ಕುರಿತು ತಿಳಿಸಿದರು.
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್ ಬಳಸಲಾಗುತ್ತಿದ್ದು, ಮತದಾರರು ಮತದಾನ ಮಾಡುವ ಮೂಲಕ ತಾವು ಚಲಾಯಿಸಿದ ಮತವನ್ನು ಮತಖಾತ್ರಿ ಯಂತ್ರದ ಮೂಲಕ ಖಚಿತ ಪಡಿಸಿಕೊಳ್ಳಬಹುದಾಗಿದೆ ಎಂದು ಸಿಇಒ ಅವರು ಮಾಹಿತಿ ನೀಡಿದರು.
ಮೇ 12 ರಂದು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ತಮ್ಮ ಆಟೋದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೂ ಸಹ ಕಡ್ಡಾಯವಾಗಿ ಮತದಾನ ಮಾಡುವಂತೆ ತಾವು ಕೂಡ ತಿಳಿಸಬೇಕೆಂದು ರಾಮಚಂದ್ರನ್ ಅವರು ಆಟೋ ಚಾಲಕರಿಗೆ ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪುಂಡಲೀಕ ಅನವಾಲ ಸೇರಿದಂತೆ ಜಿಲ್ಲಾ ಪಂಚಾಯತ ಸಿಬ್ಬಂದಿ ಹಾಗೂ ಆಟೋ ರಿಕ್ಷಾ ಚಾಲಕರು ಪಾಲ್ಗೊಂಡಿದ್ದರು.Voting awareness for posters for autos

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.