ಉತ್ತಮ ಸಮಾಜಕ್ಕಾಗಿ

ಮತದಾನ ಜಾಗೃತಿ ಜಾಥಾ ಮತದಾನ ಪ್ರತಿಯೊಬ್ಬರ ಕರ್ತವ್ಯ – ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ

Voting awareness Jatha Voting is the duty of everybody - Deputy Commissioner S. Jiaullah

0

ಬೆಳಗಾವಿ: (news belgaum): ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದ್ದು, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಕರೆ ನೀಡಿದರು.
ಭಾರತ ಚುನಾವಣಾ ಆಯೋಗ, ರಾಜ್ಯ ಸರಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಮತದಾನ ಜಾಗೃತಿ ಕುರಿತು ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಿಂದ ಮಂಗಳವಾರ (ಫೆ.27) ಏರ್ಪಡಿಸಿದ್ದ ಬೃಹತ್ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
News Belgaum-ಮತದಾನ ಜಾಗೃತಿ ಜಾಥಾ ಮತದಾನ ಪ್ರತಿಯೊಬ್ಬರ ಕರ್ತವ್ಯ - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ News Belgaum-ಮತದಾನ ಜಾಗೃತಿ ಜಾಥಾ ಮತದಾನ ಪ್ರತಿಯೊಬ್ಬರ ಕರ್ತವ್ಯ - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ 1 News Belgaum-ಮತದಾನ ಜಾಗೃತಿ ಜಾಥಾ ಮತದಾನ ಪ್ರತಿಯೊಬ್ಬರ ಕರ್ತವ್ಯ - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ 2ಮತದಾರರು ಯಾವುದೇ ಆಮಿಷಗಳಿಗೆ ಮರುಳಾಗದೇ ಮತ ಚಲಾಯಿಸಿ, ಪ್ರಜಾಪ್ರಭುತ್ವವನ್ನು ಸುಭದ್ರಗೊಳಿಸಬೇಕು ಎಂದು ಹೇಳಿದರು.
ಚುನಾವಣಾ ಗುರುತಿನ ಚೀಟಿಗಾಗಿ ಹೆಸರು ನೋಂದಾವಣಿ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕಲು ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ನಂತರ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಜಿಲ್ಲಾಧಿಕಾರಿ ಕಾರ್ಯಾಲಯ ಆವರಣ ಹಾಗೂ ಚನ್ನಮ್ಮ ವೃತ್ತದಲ್ಲಿ ಮತದಾನ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್, ನಗರ ಪೊಲೀಸ್ ಆಯುಕ್ತರಾದ ಡಿ.ಸಿ. ರಾಜಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಎಚ್. ಸುಧೀರಕುಮಾರ ರೆಡ್ಡಿ, ಡಿಸಿಪಿ ಸೀಮಾ ಲಾಟ್ಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಬೃಹತ್ ಜಾಗೃತಿ ಜಾಥಾ:
ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಿಂದ ಆರಂಭವಾದ ಜಾಥಾ ಚನ್ನಮ್ಮ ವೃತ್ತ, ಜಿಲ್ಲಾಸ್ಪತ್ರೆ, ಅಂಬೇಡ್ಕರ್ ರಸ್ತೆ, ಕೊಲ್ಲಾಪುರ ಸರ್ಕಲ್ ಮಾರ್ಗವಾಗಿ ಕುಮಾರ ಗಂಧರ್ವ ರಂಗಮಂದಿರ ತಲುಪಿತು.
ನಗರದ ವಿವಿಧ ಶಾಲೆಗಳ ಎನ್‍ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮತದಾನ ಜಾಗೃತಿ ಕುರಿತ ಭಿತ್ತಿ ಪತ್ರಗಳು, ಬ್ಯಾನರ್‍ಗಳನ್ನು ಹಿಡಿದು ರ್ಯಾಲಿಯಲ್ಲಿ ಪಾಲ್ಗೊಂಡು, ರಸ್ತೆಯುದ್ದಕ್ಕೂ ವಿವಿಧ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಪ್ರತಿಶತ ಮತದಾನ ಬೆಳಗಾವಿ ಜಿಲ್ಲೆ ವಾಗ್ದಾನ:News Belgaum-ಮತದಾನ ಜಾಗೃತಿ ಜಾಥಾ ಮತದಾನ ಪ್ರತಿಯೊಬ್ಬರ ಕರ್ತವ್ಯ - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ 3
ನಿಮ್ಮ ಮತ-ನಿಮ್ಮ ಧ್ವನಿ, ವಿವೇಚನೆಯಿಂದ ಹಾಕಿದ ಮತ-ದೇಶದ ಜನರಿಗೆ ಹಿತ, ನಿಮ್ಮ ನಡೆ-ಮತಗಟ್ಟೆ ಕಡೆ, ನಾವು ಮತ ಚಲಾಯಿಸೋಣ-ರಾಷ್ಟ್ರ ನಿರ್ಮಾಣ ಮಾಡೋಣ, ತಪ್ಪದೇ ಮತಗಟ್ಟೆಗೆ ಹೋಗಿ ಮತ ಚಲಾಯಿಸಿ, ಪ್ರತಿಶತ ಮತದಾನ ಬೆಳಗಾವಿ ಜಿಲ್ಲೆ ವಾಗ್ದಾನ ಸೇರಿದಂತೆ ವಿವಿಧ ಜಾಗೃತಿ ಬರಹಗಳಿರುವ ಭಿತ್ತಿ ಪತ್ರಗಳು ಹಾಗೂ ಬ್ಯಾನರ್‍ಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ರ್ಯಾಲಿಯುದ್ದಕ್ಕೂ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಮತದಾನ ಜಾಗೃತಿ ಕುರಿತ ಕರಪತ್ರಗಳನ್ನು ವಿತರಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್, ನಗರ ಪೊಲೀಸ್ ಆಯುಕ್ತರಾದ ಡಿ.ಸಿ. ರಾಜಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಎಚ್. ಸುಧೀರಕುಮಾರ ರೆಡ್ಡಿ, ಡಿಸಿಪಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತÀ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶಶಿಧರ ನಾಡಗೌಡ, ಲಕ್ಷ್ಮೀ ನಿಪ್ಪಾಣಿಕರ ಸೇರಿದಂತೆ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಸಂಚಾರಿ ಪೊಲೀಸ್ ಅಧಿಕಾರಿಗಳು ಇನ್ನಿತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ನಗರದ ವಿವಿಧ ಶಾಲೆಗಳ ಪ್ರಾಚಾರ್ಯರು, ಶಿಕ್ಷಕರು, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಂಯೋಜಕರು, ಕಲಾ ತಂಡ ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.