ಉತ್ತಮ ಸಮಾಜಕ್ಕಾಗಿ

ಮತದಾನದ ಮಹತ್ವ; ವಿವಿಪ್ಯಾಟ್ ಜಾಗೃತಿ ಅಗತ್ಯ-ರಾಮಚಂದ್ರನ್

ಮತದಾರರ ನೋಂದಣಿ ಅರಿವು ಮೂಡಿಸಲು ಸೂಚನೆ Voting significance; ViviPat Awareness Required-Ramachandran

0

ಬೆಳಗಾವಿ, ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.60ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿರುವಂತಹ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನದ ಮಹತ್ವದ ಕುರಿತು ನಿರಂತರವಾಗಿ ಅರಿವು ಮೂಡಿಸಬೇಕು ಹಾಗೂ ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯ್ತಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಶುಕ್ರವಾರ(ಜ.19) ನಡೆದ ಸ್ವೀಪ್ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹದಿನೆಂಟು ವರ್ಷ ಮೇಲ್ಪಟ್ಟಿರುವ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು; ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ನೋಡಿಕೊಳ್ಳುವುದು ಹಾಗೂ ಈ ಬಾರಿ ಚುನಾವಣೆಯಲ್ಲಿ ಬಳಸಲಾಗುತ್ತಿರುವ ವಿವಿಪ್ಯಾಟ್‍ಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿರುತ್ತದೆ.
ಈ ನಿಟ್ಟಿನಲ್ಲಿ ಎಲ್ಲ ತಾಲ್ಲೂಕು ಪಂಚಾಯ್ತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.
ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಜಾಗೃತಿ ಮೂಡಿಸಲು ಶಾಲಾ-ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‍ಗಳನ್ನು ಸ್ಥಾಪಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಈ ಕ್ಲಬ್‍ಗಳ ಮೂಲಕ ಯುವ ಮತದಾರರು ಹಾಗೂ ವಿದ್ಯಾರ್ಥಿಗಳ ಪಾಲಕರಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಅಮಾನತು ಎಚ್ಚರಿಕೆ:
ಮತದಾನದ ಮಹತ್ವ; ವಿವಿಪ್ಯಾಟ್ ಜಾಗೃತಿ ಅಗತ್ಯ-ರಾಮಚಂದ್ರನ್- Tarun kranti 1ಚುನಾವಣಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ರಾಮಚಂದ್ರನ್ ಅವರು ಎಚ್ಚರಿಕೆ ನೀಡಿದರು.
ಇದೇ ವೇಳೆ ಸ್ವೀಪ್ ಸಮಿತಿ ಸಭೆಗೆ ತಡವಾಗಿ ಬಂದ ಅಧಿಕಾರಿಯೊಬ್ಬರನ್ನು ಹೊರಗೆ ಕಳುಹಿಸಿದರು.
ಮತದಾನ ಪ್ರಮಾಣ ತೀರ ಕಡಿಮೆಯಾಗಿರುವ ಮತಗಟ್ಟೆಗಳಲ್ಲಿ ಅಲ್ಲಿಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಚುನಾವಣೆ ಬಳಿಕ ಕ್ರಮಕೈಗೊಳ್ಳಲು ಅವಕಾಶವಿರುತ್ತದೆ. ಆದ್ದರಿಂದ ಅದಕ್ಕೆ ಆಸ್ಪದ ನೀಡದೇ ಉತ್ತಮವಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಪ್ರಚಾರಕ್ಕೆ ಆದ್ಯತೆ ನೀಡಿ:
ಇದೇ ಸಂದರ್ಭದಲ್ಲಿ ಮಾತನಾಡಿದ ಸ್ವೀಪ್ ಸಮಿತಿಯ ಸದಸ್ಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ಕುರೇರ್ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರ/ಬೀದಿನಾಟಕ/ಹೋರ್ಡಿಂಗ್ಸ್‍ಗಳ ಮೂಲಕ ಹೆಚ್ಚು ಪ್ರಚಾರ ಕೈಗೊಳ್ಳುವಂತೆ ತಿಳಿಸಿದರು.
ವಿಶೇಷವಾಗಿ ತಾಲ್ಲೂಕು ಕೇಂದ್ರಗಳಿಂದ ದೂರದಲ್ಲಿರುವ ಗ್ರಾಮಗಳಲ್ಲಿ ಮೊದಲ ಹಂತದ ಜಾಗೃತಿ ಕಾರ್ಯಕ್ರಮಗಳ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಸ್ವೀಪ್ ಸಮಿತಿಯ ಸದಸ್ಯರಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಬಿ.ಪುಂಡಲೀಕ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಡಿ.ಕಾಂಬಳೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುನಿರಾಜು, ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗುರುನಾಥ ಕಡಬೂರ, ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯ್ತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Voting significance; ViviPat Awareness Required-Ramachandran

80%
Awesome
  • Design

Leave A Reply

 Click this button or press Ctrl+G to toggle between Kannada and English

Your email address will not be published.