ಉತ್ತಮ ಸಮಾಜಕ್ಕಾಗಿ

ವಿಶ್ವ ತಂಬಾಕು ರಹಿತ ದಿನಾಚರಣೆ

World Tobacco Day

0

ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ
ಬೆಳಗಾವಿ:(news belgaum) ತಂಬಾಕು ಸೇವನೆ ಮಾಡುವವರಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ವ್ಯಸನ ಮುಕ್ತರನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ಹೇಳಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ (ಮೇ 31) ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವ ತಂಬಾಕು ರಹಿತ ದಿನಾಚರಣೆ- Tarun kranti 1ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾಯಕರ್ತೆಯರು ತಮ್ಮ ಕ್ಷೇತ್ರಗಳಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಬೇಕು. ಅದರಂತೆ ಶಾಲಾ, ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ಮಾಡದಂತೆ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.
ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಅಔಖಿPಂ) ಉಲ್ಲಂಘಿಸುವವರ ವಿರುದ್ದ ದಂಡ ವಿಧಿಸುತ್ತಿದ್ದರು ವ್ಯಸನಿಗಳಲ್ಲಿ ಜಾಗೃತಿ ಮೂಡದಿರುವುದು ಖೇದಕರವಾಗಿದ್ದು, ಇನ್ನು ಮುಂದೆ ಕೇವಲ ಮೇ 31 ರಂದು ಮಾತ್ರ ತಂಬಾಕು ರಹಿತ ದಿನವಾಗದೆ ಪ್ರತಿ ದಿನವು ಕೂಡಾ ತಂಬಾಕು ರಹಿತ ದಿನವಾಗಬೇಕೆಂದು ಕರೆ ನೀಡಿದರು.
ನಗರ ಪೊಲೀಸ್ ಆಯುಕ್ತರಾದ ಡಾ. ಡಿ.ಸಿ.ರಾಜಪ್ಪ ಅವರು ಮಾತನಾಡಿ, ಜಗತ್ತಿನಲ್ಲಿ ಎಲ್ಲರೂ ಒಂದು ದಿನ ತಂಬಾಕು ಸೇವನೆ ನಿಲ್ಲಿಸಿದರೆ ಒಂದು ಅಂದಾಜಿನ ಪ್ರಕಾರ 3.5 ಲಕ್ಷ ಕೋಟಿ ಉಳಿತಾಯವಾಗುತ್ತದೆ ಎಂದು ಹೇಳಿದರು.
ಹದಿಹರೆಯದ ವಯೋಮಾನದಲ್ಲಿ ದಯಶ್ಚಟಗಳಿಗೆ ಅಂಟಿಕೊಂಡ ಸಹಪಾಠಿಗಳ ಸಹವಾಸದಿಂದ ಮುಗ್ದರು ದಯಶ್ಚಗಳನ್ನು ಕಲಿತ್ತಿರುವುದು ವಿಷಾದನೀಯ. ತಂಬಾಕು ಮತ್ತು ತಂಬಾಕು ಉತ್ಪನ್ನಗಳಿಂದ ಆಗುವ ತೊಂದರೆಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಿ ನೀತಿ ಶಿಕ್ಷಣ ನೀಡಬೇಕು ಎಂದರು.
ಧೂಮಪಾನ ಶರೀರವನ್ನು ಹಾಳು ಮಾಡುವುದಲ್ಲದೆ, ವ್ಯಸನಿಯು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿಯುತ್ತಾನೆ. ಕೆಲವೊಂದು ಸಾರಿ ದುಷ್ಕøತ್ಯಕ್ಕೂ ಪ್ರಯತ್ನ ಮಾಡುತ್ತಾನೆ. ವಿಶ್ವ ತಂಬಾಕು ರಹಿತ ದಿನವಾದ ಇಂದು ಜಿಲ್ಲೆಯಲ್ಲಿ ದಾಳಿ ಮಾಡಿ ಕಾನೂನು ಉಲ್ಲಂಘಿಸಿದರ ಮೇಲೆ 250 ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲು ಮಾಡಲಾಗಿದೆ ಎಂದು ತಿಳಿಸಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ಎಸ್.ಟಿ. ಕಳಸದ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವೈದ್ಯ ಸಮೂಹದೊಂದಿಗೆ ಆಶಾ ಕಾರ್ಯಕರ್ತೆಯರು ಒಟ್ಟಾಗಿ ಸೇರಿ ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರಿಂದ ತಂಬಾಕು ಸೇವನೆಯನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.
ಬೀಮ್ಸ್‍ನ ದಂತ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಕುಮಾರ ಸ್ವಾಮಿ ನಾಯಕ ಅವರು ಮಾತನಾಡಿ, ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಉಪನ್ಯಾಸ ನೀಡಿದರು.
ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕಿರಣ ಕಿಣಿ, ಬೀಮ್ಸ್‍ನ ಮುಖ್ಯ ಆಡಳಿತಾಧಿಕಾರಿಗಳಾದ ಬಿರಾದಾರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ಬಿ.ಎನ್.ತುಕ್ಕಾರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳಾದ ಡಾ. ಅಪ್ಪಾಸಾಹೇಬ ನರಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ. ಯಲಿಗಾರ ಅವರು ವಂದಿಸಿದರು. ಹಿರಿಯ ಆರೋಗ್ಯ ಸಹಾಯಕರಾದ ಸಿ.ಜಿ. ಅಗ್ನಿಹೋತ್ರಿ ಅವರು ನಿರೂಪಿಸಿದರು.

ಜಾಗೃತಿ ಜಾಥಾ:
ವಿಶ್ವ ತಂಬಾಕು ರಹಿತ ದಿನಾಚರಣೆ- Tarun krantiವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಿಂದ ಬೀಮ್ಸ್ ಕಾಲೇಜಿನವರೆಗೆ ಜಾಗೃತಿ ಜಾಥಾ ಜರುಗಿತು.
ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕಿರಣ ಕಿಣಿ ಅವರು ಜಾಥಾಕ್ಕೆ ಚಾಲನೆ ನೀಡಿದರು.
ಜಿಲಾ ್ಲಆರೋಗ್ಯಾಧಿಕಾರಿ ಡಾ. ಅಪ್ಪಾಸಾಹೇಬ ನರಟ್ಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ಬಿ.ಎನ್.ತುಕ್ಕಾರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ. ಶೈಲಜಾ ತಮ್ಮನ್ನವರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳಾದ ಡಾ. ಚಾಂದಿನಿ ದೇವಡಿ, ಡಾ. ಸಾವಿತ್ರಿ ಬೆಂಡಿಗೇರಿ, ಡಾ. ಸಂಜೀವ ನಾಂದ್ರೆ, ಡಾ. ಮುಭಾಶೀರ ಸೇರಿದಂತೆ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದರು.World Tobacco Day

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.