ಉತ್ತಮ ಸಮಾಜಕ್ಕಾಗಿ

‘ಯೋಗದ ನಡಿಗೆ-ಆರೋಗ್ಯದೆಡೆಗೆ’- ಬೃಹತ್ ಜಾಥಾ ಯೋಗವು ಭಾರತದ ಭವ್ಯ ಪರಂಪರೆ- ಸಂಸದ ಅಂಗಡಿ

'Yoga Walking-To Health' - The Big Jatha Yoga is India's Greatest Heritage-MP Store

0

ಬೆಳಗಾವಿ: (news belgaum)ಯೋಗವು ಭಾರತದ ಭವ್ಯ ಪರಂಪರೆಯಾಗಿದ್ದು, ಇದರ ಮಹತ್ವವನ್ನು ಅರಿತುಕೊಂಡಿರುವ ಜಗತ್ತಿನ ಇತರೆ ರಾಷ್ಟ್ರಗಳು ಇಂದು ಭಾರತದ ಕಡೆ ನೋಡುವಂತಾಗಿದೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಯುಷ್ ಇಲಾಖೆ, ಆರೋಗ್ಯ, ಸಾರ್ವಜನಿಕ ಶಿಕ್ಷಣ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ನೆಹರೂ ಯುವ ಕೇಂದ್ರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಬುಧವಾರ (ಜೂನ್ 20) ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ-ಆರೋಗ್ಯದೆಡೆಗೆ’ ಜಾಗೃತಿ ಜಾಥಾ ಸಮಾರೋಪ ಸಂದರ್ಭದಲ್ಲಿ ಅವರು ಮಾತನಾಡಿದರು.
ಭಾರತದ ಪರಂಪರೆಯಾಗಿ ಬೆಳೆದುಬಂದಿರುವ ಯೋಗವು ಇಂದು ವಿಶ್ವವ್ಯಾಪಿಯಾಗಿ ಪಸರಿಸಿದ್ದು, ಈ ನಿಟ್ಟಿನಲ್ಲಿ ಭಾರತ ಸರ್ಕಾರವು ಸಾಕಷ್ಟು ಶ್ರಮ ವಹಿಸಿದೆ ಎಂದರು.
ಯೋಗದಿಂದ ಆರೋಗ್ಯ ಮಾತ್ರವಲ್ಲ; ಮಾನಸಿಕ ನೆಮ್ಮದಿಯು ಲಭಿಸುತ್ತದೆ. ಆದ್ದರಿಂದ ಯೋಗವನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸೋಣ ಎಂದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಅವರು, ವಿಶ್ವ ಆರೋಗ್ಯ ದಿನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದು ದಿನ ಮುಂಚಿತವಾಗಿ ಆಯೋಜಿಸಲಾಗಿದ್ದ ಜಾಥಾವು ಯಶಸ್ವಿಯಾಗಿದ್ದು, ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.

ಜಿಲ್ಲಾಧಿಕಾರಿಗಳಿಂದ ಚಾಲನೆ:
4ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬುಧವಾರ(ಜೂ.20) ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ-ಆರೋಗ್ಯದೆಡೆಗೆ’ ಜಾಥಾಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಚಾಲನೆ ನೀಡಿದರು.
News Belgaum-‘ಯೋಗದ ನಡಿಗೆ-ಆರೋಗ್ಯದೆಡೆಗೆ’- ಬೃಹತ್ ಜಾಥಾ ಯೋಗವು ಭಾರತದ ಭವ್ಯ ಪರಂಪರೆ- ಸಂಸದ ಅಂಗಡಿ 1ಅಲ್ಲಿಂದ ಆರಂಭಗೊಂಡ ಜಾಥಾವು ಚನ್ನಮ್ಮ ವೃತ್ತ, ಕಾಲೇಜು ರಸ್ತೆ ಮೂಲಕ ಬೋಗಾರವೇಸ್ ವೃತ್ತದಲ್ಲಿ ಸಮಾರೋಪಗೊಂಡಿತು.
ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಕೆಡೆಟ್‍ಗಳು, ಸೇವಾದಳದ ಕಾರ್ಯಕರ್ತರು, ಯೋಗ ತರಬೇತಿ ನೀಡುವ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಸಾವಿರಾರು ಜನರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್., ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುರೇಶ್ ದೊಡವಾಡ, ಡಾ.ಸುರೇಶ್ ಸುಣಧೋಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ಬೆಳಿಗ್ಗೆ 7 ಗಂಟೆಯಿಂದ 8ರವರೆಗೆ ನಗರದ ಗಾಂಧೀಭವನದಲ್ಲಿ ನಡೆಯಲಿದೆ.
ಅದೇ ರೀತಿ ಯೋಗದ ಮಹತ್ವ ಸಾರುವ ವಿಶಿಷ್ಟ ಜಲ ಯೋಗ ಪ್ರದರ್ಶನವು ಸಂಜೆ 5 ಗಂಟೆಗೆ ಜಿಲ್ಲಾ ಕ್ರೀಡಾಂಗಣ ಬಳಿಯ ಕೆಎಲ್‍ಇ ಸಂಸ್ಥೆಯ ಜೆಎನ್‍ಎಂಸಿ ಒಲಿಂಪಿಕ್ ಈಜುಕೊಳದಲ್ಲಿ ನಡೆಯಲಿದೆ’Yoga Walking-To Health’ – The Big Jatha Yoga is India’s Greatest Heritage-MP Store  

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.